Monday, June 8, 2026
Google search engine

Homeಅಪರಾಧಕೆಐಎ ವಿಮಾನ ನಿಲ್ದಾಣದಲ್ಲಿ ₹5.9 ಕೋಟಿ ಮೌಲ್ಯದ ಗಾಂಜಾ ಜಪ್ತಿ

ಕೆಐಎ ವಿಮಾನ ನಿಲ್ದಾಣದಲ್ಲಿ ₹5.9 ಕೋಟಿ ಮೌಲ್ಯದ ಗಾಂಜಾ ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದು, ಒಟ್ಟು 5.9 ಕೋಟಿ ರೂ. ಮೌಲ್ಯದ 16.86 ಕೆಜಿ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.

ಜೂ.4ರಂದು ಬ್ಯಾಂಕಾಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಆಗಮಿಸಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಆತನ ಬ್ಯಾಗ್ ನಲ್ಲಿ ಬಚ್ಚಿಟ್ಟಿದ್ದ 2.33 ಕೋಟಿ ರೂ. ಮೌಲ್ಯದ 6.66 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೊಂದು ಪ್ರಕರಣ ಜೂ.6ರಂದು ನಡೆದಿದೆ. ಅಂದು ಬ್ಯಾಂಕಾಕ್ ನಿಂದ ಆಗಮಿಸಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಆತನ ಚೆಕ್-ಇನ್ ಬ್ಯಾಗೇಜ್ ನಲ್ಲಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಆತನ ಬ್ಯಾಗಿನಲ್ಲಿ ಸುಮಾರು 3.57 ಕೋಟಿ ರೂ. ಮೌಲ್ಯದ 10.20 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ.

ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು ಎನ್ಡಿಪಿಎಸ್ (NDPS) ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular