Tuesday, June 9, 2026
Google search engine

Homeಸ್ಥಳೀಯಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು

ಮಂಡ್ಯ : ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್ ತಾಯಿ ಜ್ಯೋತಿ, ಮಗ ಸಂತೋಷ್  ಮೃತಪಟ್ಟವರು. ನಿನ್ನೆ ರಾತ್ರಿ ತಾಯಿ ಹಾಗೂ ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ತಂದೆ ಪ್ರಭಾಕರ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ತಿಂಗಳ ಹಿಂದಷ್ಟೇ ಮಗ ಸಂತೋಷ್ ಗೆ ಮದುವೆಯಾಗಿತ್ತು. ಮನೆಯ ಮತ್ತೊಂದು ಭಾಗದಲ್ಲಿ ತಾಯಿ ಜ್ಯೋತಿ ಹಾಗೂ ಮಗ ಸಂತೋಷ್ ಸಾವನ್ನಪ್ಪಿದ್ದರೆ, ತಂದೆ ಪ್ರಭಾಕರ್ ಬಟ್ಟೆ ಅಂಗಡಿಯಲ್ಲಿ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಲದ ಕಿರುಕುಳದಿಂದ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪ್ರಭಾಕರ್, ತನ್ನ ಬಟ್ಟೆ ಅಂಗಡಿ ತುಂಬಾ ನಷ್ಟದಲ್ಲಿ ನಡೆಯುತ್ತಿತ್ತು. ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದ್ದರಿಂದ ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದಾರೆ. ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular