ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ.
ಸಿಎಂ ಆದ ಬಳಿಕ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಪಕ್ಷದ ಹೈಕಮಾಂಡ್ ನಾಯಕರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.
ಇದೇ ವೇಳೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ. ಸಚಿವರ 2ನೇ ಪಟ್ಟಿ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.
ಈ ನಡುವೆ ಸಿಎಂ ಡಿಕೆ ಶಿವಕುಮಾರ್ ಬಳಿಕ ಡಿಸಿಎಂ ಡಾ.ಜಿ. ಪರಮೇಶ್ವರ್ ಸಹ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.



