Thursday, June 11, 2026
Google search engine

Homeರಾಜ್ಯಸುದ್ದಿಜಾಲಕೆಆರ್‌ಎಸ್ ನೀರಿನ ಮಟ್ಟ ಕುಸಿತ: ಕುಡಿಯುವ ನೀರಿನ ಆತಂಕ

ಕೆಆರ್‌ಎಸ್ ನೀರಿನ ಮಟ್ಟ ಕುಸಿತ: ಕುಡಿಯುವ ನೀರಿನ ಆತಂಕ

ಮೈಸೂರು: ಮಳೆಗಾಲ ಆರಂಭವಾಗಿದ್ದರೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಾಗದ ಕಾರಣ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಇಳಿದಿದೆ. 124 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ ಕೇವಲ 11 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಇದರಲ್ಲಿ 4 ರಿಂದ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದ್ದು, ಬಳಕೆಗೆ ಕೇವಲ 7 ಟಿಎಂಸಿ ನೀರು ಮಾತ್ರ ಲಭ್ಯವಿದೆ.

ಜೂನ್ ತಿಂಗಳ ಅರ್ಧ ಭಾಗ ಕಳೆದರೂ ನಿರೀಕ್ಷಿತ ಮಳೆಯಾಗದಿರುವುದು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ. ಈ ಪರಿಸ್ಥಿತಿ ಮುಂದುವರಿದರೆ ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಇದರ ನಡುವೆಯೇ ಸುಪ್ರೀಂ ಕೋರ್ಟ್ ಆದೇಶದಂತೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ ನಿಗದಿತ ಪ್ರಮಾಣದ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕಿರುವುದು ಮತ್ತಷ್ಟು ಒತ್ತಡ ಹೆಚ್ಚಿಸಿದೆ.

RELATED ARTICLES
- Advertisment -
Google search engine

Most Popular