Thursday, June 18, 2026
Google search engine

Homeರಾಜಕೀಯವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು  ಮತದಾನ

ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು  ಮತದಾನ

ಬೆಂಗಳೂರು: ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು  ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದೇ 30ರಂದು ವಿಧಾನ ಪರಿಷತ್‌ ನ 7 ಸ್ಥಾನಗಳು ತೆರವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಮತದಾನ ನಡೆಯುತ್ತಿದ್ದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ವೋಟಿಂಗ್ ಗೆ ಅವಕಾಶವಿದೆ.  ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು ನಂತರ ಫಲಿತಾಂಶ ಘೋಷಣೆಯಾಗಲಿದೆ.

ಕಾಂಗ್ರೆಸ್‌ 4 ಹಾಗೂ ಬಿಜೆಪಿ 2 ಹಾಗೂ ಜೆಡಿಎಸ್  ಒಬ್ಬ ಅಭ್ಯರ್ಥಿ ಕಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ಬಿ ಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರ್, ಪಿ. ವಿ ಮೋಹನ್ ಮತ್ತು ಶಿವಣ್ಣ ಮಳವಳ್ಳಿ  ಮತ್ತು ಬಿಜೆಪಿಯಿಂದ ರಘು ಕೌಟಿಲ್ಯ ಮತ್ತು ಲಿಂಗರಾಜ್ ಪಾಟೀಲ್ ಕಣಕ್ಕಿಳಿದಿದ್ದಾರೆ.

ಏಳನೇ ಸ್ಥಾನಕ್ಕೆ, ಕಾಂಗ್ರೆಸ್‌ನ ವಿನಯ್ ಕಾರ್ತಿಕ್ ಮತ್ತು ಜೆಡಿಎಸ್‌ನ ಗೋವಿಂದರಾಜು ನಡುವೆ ತೀವ್ರ ಸ್ಪರ್ಧೆ ನಡೆಯುವ ಸಾಧ್ಯತೆಯಿದೆ.

RELATED ARTICLES
- Advertisment -
Google search engine

Most Popular