ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಶಾಸಕರಿಗೆ ದುಡ್ಡಿನ ಆಮಿಷವೊಡ್ಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಭ್ಯರ್ಥಿಗಳ ಗೆಲುವಿಗೆ ಅಗತ್ಯವಿರುವ ಮತಗಳನ್ನು ಪಡೆದುಕೊಂಡಿದ್ದು, ಹೆಚ್ಚುವರಿ ಮತಗಳನ್ನು ಮೈತ್ರಿ ಪಕ್ಷ ಜೆಡಿಎಸ್ಗೆ ವರ್ಗಾಯಿಸಿದೆ ಎಂದರು.
ಇಬ್ಬರು ಉಚ್ಚಾಟಿತ ಬಿಜೆಪಿ ಶಾಸಕರು ಕಾಂಗ್ರೆಸ್ ಪರ ಮತ ಚಲಾಯಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಈಗ ಕಾಂಗ್ರೆಸ್ ಜೊತೆ ಇದ್ದಾರೆ ಎಂದು ಹೇಳಿದರು. ಯತ್ನಾಳ್ ಬಿಜೆಪಿ ಪರವೇ ಮತ ಹಾಕುವುದಾಗಿ ತಿಳಿಸಿದ್ದಾರೆ ಎಂದರು.



