Sunday, June 21, 2026
Google search engine

Homeರಾಜ್ಯಸುದ್ದಿಜಾಲಮೈ ಶುಗರ್ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ಭೇಟಿ: 2026-27ರ ಕಬ್ಬು ನುರಿಸುವ ಹಂಗಾಮಿಗೆ ಸಿದ್ಧತೆ ಪರಿಶೀಲನೆ

ಮೈ ಶುಗರ್ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ಭೇಟಿ: 2026-27ರ ಕಬ್ಬು ನುರಿಸುವ ಹಂಗಾಮಿಗೆ ಸಿದ್ಧತೆ ಪರಿಶೀಲನೆ

ಮಂಡ್ಯ: ಇಂದು ಮೈ ಶುಗರ್ ಸಕ್ಕರೆ ಕಾರ್ಖಾನೆಗೆ (ದಿ ಮೈಸೂರು ಶುಗರ್ ಕಂಪನಿ ಲಿಮಿಟೆಡ್) 2026-27 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭಿಸಲು ಸಿದ್ಧತಾ ಕಾರ್ಯಗಳ ಬಗ್ಗೆ ತಿಳಿಯಲು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

2026-27 ನೇ ಸಾಲಿನಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಏಜೆನ್ಸಿಯು ನೇಮಕಗೊಂಡಿದ್ದು ಈಗಾಗಲೇ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನಲೆಯಲ್ಲಿ ಕಾರ್ಖಾನೆಯನ್ನು ಪುನರ್ ಆರಂಭ ಮಾಡಿ ಕಬ್ಬು ನುರಿಸುವ ಕಾರ್ಯವನ್ನು ಪ್ರಾರಂಭಿಸುವಲ್ಲಿ ಕಾರ್ಮಿಕರು ಸಿದ್ದತೆ ಕಾರ್ಯಗಳನ್ನು ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕರು ಮಂಗಲದಾಸ್, ಜನರಲ್ ಮ್ಯಾನೇಜರ್ ಕೆ. ಎಸ್. ವೀರೇಶ್, ಆಡಳಿತ ಅಧಿಕಾರಿ ಸ್ವಾಮಿ ಗೌಡ ಹಾಜರಿದ್ದರು.

RELATED ARTICLES
- Advertisment -
Google search engine

Most Popular