ಕೋಲಾರ: ಮಾವಿನ ಹಣ್ಣಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಮಾವು ಬೆಳೆಗಾರರ ಸಂಘ ಹಾಗೂ ವಿವಿಧ ಸಂಘಟನೆಗಳು ಇಂದು ಕೋಲಾರ ಬಂದ್‌ಗೆ ಕರೆ ನೀಡಿವೆ.
ಕೋಲಾರ, ಶ್ರೀನಿವಾಸಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾವಿಗೆ ಪ್ರತಿ ಟನ್‌ಗೆ 8ರಿಂದ 10 ಸಾವಿರ ರೂ. ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ ಪ್ರತಿಭಟನಾಕಾರರು, ರಸ್ತೆಗೆ ಮಾವಿನ ಹಣ್ಣು ಸುರಿದು ಆಕ್ರೋಶ ವ್ಯಕ್ತಪಡಿಸಿದರು.



