Wednesday, June 24, 2026
Google search engine

Homeಅಪರಾಧಕನ್ನಡ ಬಾವುಟ ಬಳಕೆ ವಿವಾದ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ

ಕನ್ನಡ ಬಾವುಟ ಬಳಕೆ ವಿವಾದ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ

ಬೆಂಗಳೂರು: ನಮ್ಮ ಮೆಟ್ರೋ ಸಿಬ್ಬಂದಿ ಕನ್ನಡ ಬಾವುಟಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ಅಳವಡಿಕೆಗೆ ತರಲಾಗಿದ್ದ ‘ಕರೆಂಟ್ ಕಲೆಕ್ಟರ್ ಶೂ ಕ್ಯಾಪ್’ ಅನ್ನು ಸಾಗಿಸುವ ವೇಳೆ ಅದನ್ನು ಕಟ್ಟಲು ಕನ್ನಡ ಬಾವುಟವನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರ ತಡರಾತ್ರಿ ನಡೆದ ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿವೆ.

ಕನ್ನಡದ ನಾಡು, ನುಡಿ ಮತ್ತು ಸಂಸ್ಕೃತಿಯ ಪ್ರತೀಕವಾಗಿರುವ ಬಾವುಟವನ್ನು ಈ ರೀತಿಯಲ್ಲಿ ಬಳಸಿರುವುದು ಖಂಡನೀಯ ಎಂದು ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಘಟನೆಯ ಜವಾಬ್ದಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಈ ಕುರಿತು ನಮ್ಮ ಮೆಟ್ರೋ ಅಥವಾ ಸಂಬಂಧಿತ ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಪ್ರಕಟವಾಗಬೇಕಿದೆ.

RELATED ARTICLES
- Advertisment -
Google search engine

Most Popular