Wednesday, June 24, 2026
Google search engine

Homeರಾಜ್ಯವಿದ್ಯುತ್ ಸಂಪರ್ಕಕ್ಕೆ ಸ್ವಾಧೀನ ಪ್ರಮಾಣಪತ್ರದಿಂದ ವಿನಾಯಿತಿ : ಸೆಸ್ಕ್ ವ್ಯಾಪ್ತಿಯಲ್ಲಿ OC ವಿನಾಯಿತಿ, ಅರ್ಜಿ ಆಹ್ವಾನ

ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನ ಪ್ರಮಾಣಪತ್ರದಿಂದ ವಿನಾಯಿತಿ : ಸೆಸ್ಕ್ ವ್ಯಾಪ್ತಿಯಲ್ಲಿ OC ವಿನಾಯಿತಿ, ಅರ್ಜಿ ಆಹ್ವಾನ

ಮೈಸೂರು :  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕವನ್ನು ಪಡೆಯಲು ಸ್ವಾಧೀನ ಪ್ರಮಾಣಪತ್ರ(Occupancy Certificate) ನೀಡುವುದರಿಂದ ಒಂದು ಬಾರಿಯ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಮತ್ತು ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 2400 ಚದರ ಅಡಿಗಳವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಕಿಲ್ಟ್ ಪಾರ್ಕಿಂಗ್+4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳು ಪೂರ್ಣಗೊಂಡು, ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ 31.5.2026ರ ಒಳಗಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೆ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಈ ಆದೇಶ ಹೊರಡಿಸಿದೆ.

ಆದೇಶ ಪ್ರಕಟಗೊಂಡ ದಿನದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ, ಸ್ವಾಧೀನಾನುಭವ ಪ್ರಮಾಣಪತ್ರ(OC) ಪಡೆಯುವುದರಿಂದ ಒಂದು ಬಾರಿಗೆ ವಿನಾಯಿತಿ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ ಇವುಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಆದ್ದರಿಂದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್)‌ದ ವ್ಯಾಪ್ತಿಯ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸೆಸ್ಕ್‌ ಉಪ ವಿಭಾಗ ಕಚೇರಿಗಳನ್ನು ಸಂಪರ್ಕಿಸುವಂತೆ ಸೆಸ್ಕ್‌ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES
- Advertisment -
Google search engine

Most Popular