Thursday, June 25, 2026
Google search engine

Homeರಾಜ್ಯತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಕೊಪ್ಪಳ: ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರ ಪ್ರದೇಶದ ನೀರಾವರಿಗೆ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಅಳವಡಿಸಲಾದ 33 ನೂತನ ಕ್ರಸ್ಟ್ ಗೇಟ್‌ಗಳನ್ನು ಇಂದು ಲೋಕಾರ್ಪಣೆ ಮಾಡಲಾಯಿತು.

ಹೊಸಪೇಟೆಯ ಟಿ.ಬಿ. ಡ್ಯಾಂನ ಗೇಟ್‌ ನಂ. 18ರ ಬಳಿ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಜಂಟಿ ಸಹಯೋಗದೊಂದಿಗೆ ನಡೆದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ, ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಸಿ. ಆರ್. ಪಾಟೀಲ್, ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿಗಳಾದ ಎ. ರೇವಂತ್‌ ರೆಡ್ಡಿಯವರ ಘನ ಉಪಸ್ಥಿತಿಯಲ್ಲಿ ನೂತನವಾಗಿ ಅಳವಡಿಸಿದ 33 ಸ್ಪಿಲ್‌ವೇ ಗೇಟ್‌ಗಳನ್ನು ಬಟನ್ ಒತ್ತುವ ಮೂಲಕ ಲೋಕಾರ್ಪಣೆಗೊಳಿಸಲಾಯಿತು.

₹51 ಕೋಟಿ ವೆಚ್ಚದಲ್ಲಿ ಈ ಗೇಟ್‌ಗಳನ್ನು ಅಳವಡಿಸಲಾಗಿದೆ. 2024ರ ಆಗಸ್ಟ್ 10ರಂದು ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿದ್ದ ಪರಿಣಾಮ ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಬಳಿಕ ತಜ್ಞರ ಸಲಹೆ ಮೇರೆಗೆ ತಾತ್ಕಾಲಿಕ ಕ್ರಮ ಕೈಗೊಂಡು, ಇದೀಗ ಎಲ್ಲ 33 ಗೇಟ್‌ಗಳನ್ನು ನೂತನವಾಗಿ ಅಳವಡಿಸಿ ಮಹತ್ವದ ಕಾಮಗಾರಿ ಪೂರ್ಣಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಸಚಿವರುಗಳಾದ ಶ್ರೀ ಹೆಚ್. ಕೆ. ಪಾಟೀಲ್, ಶ್ರೀ ಎನ್. ಎಸ್. ಬೋಸರಾಜು ಹಾಗೂ ಶ್ರೀ ಶಿವರಾಜ್ ತಂಗಡಗಿ ಅವರು ಸೇರಿದಂತೆ ಶಾಸಕರು, ಮುಖಂಡರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular