• ಅಗತ್ಯ ದಾಖಲೆ ಸಿದ್ಧವಿಟ್ಟುಕೊಳ್ಳಲು ಮನವಿ
• ಮನೆ ಬಾಗಿಲಿಗೆ ಬರಲಿದ್ದಾರೆ ಮೀಟರ್ ರೀಡರ್, ಸಿಬ್ಬಂದಿ
ಮಂಡ್ಯ: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹಣೆ ಕಾರ್ಯ ಬುಧವಾರದಿಂದ(ಜುಲೈ 01) ಆರಂಭಗೊಂಡಿದ್ದು, ಗ್ರಾಹಕರು ಸಹಕರಿಸುವಂತೆ ಚಾವಿಸನಿನಿ (ಸೆಸ್ಕ್) ಕೋರಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸೆಸ್ಕ್, 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಸೆಸ್ಕ್ ನ ಮೀಟರ್ ರೀಡರ್ಗಳು ಹಾಗೂ ಸಿಬ್ಬಂದಿ, ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಹಾಗೂ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.
ಸೆಸ್ಕ್ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ನೀಡಬೇಕಾದ ದಾಖಲಾತಿಗಳ ವಿವರ:
- ಆಧಾರ್ ಕಾರ್ಡ್
- ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮತದಾರರ ಗುರುತಿನ ಚೀಟಿ (ವೋಟರ್ ಐಡಿ)
- ಪ್ಯಾನ್ ಕಾರ್ಡ್
- ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ)
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ (ಅನ್ವಯಿಸುವಲ್ಲಿ ಮಾತ್ರ)
ಈ ಪ್ರಕ್ರಿಯೆಗೆ ಮೀಟರ್ ರೀಡರ್ಗಳ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಸೆಸ್ಕ್ನ ಅಧಿಕೃತ ಮೀಟರ್ ರೀಡರ್ಗಳ ಗುರುತಿನ ಚೀಟಿಯನ್ನು ಪರಿಶೀಲಿಸಿ, ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೆಸ್ಕ್ ಮನವಿ ಮಾಡಿದೆ.



