Thursday, July 2, 2026
Google search engine

Homeಬ್ರೇಕಿಂಗ್ ನ್ಯೂಸ್ವಿಧಾನ ಪರಿಷತ್‌ ಸದಸ್ಯರಾಗಿ ಹರಿಪ್ರಸಾದ್, ರಘು ಕೌಟಿಲ್ಯ ಲಿಂಗರಾಜ ಪಾಟೀಲ ಪ್ರಮಾಣ ವಚನ ಸ್ವೀಕಾರ

ವಿಧಾನ ಪರಿಷತ್‌ ಸದಸ್ಯರಾಗಿ ಹರಿಪ್ರಸಾದ್, ರಘು ಕೌಟಿಲ್ಯ ಲಿಂಗರಾಜ ಪಾಟೀಲ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಘು ಕೌಟಿಲ್ಯ, ಲಿಂಗರಾಜ ಪಾಟೀಲ ಅವರು ಇಂದು (ಗುರುವಾರ) ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ವಿಧಾನ ಪರಿಷತ್‌ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ, ಅಧಿಕಾರ ಸ್ವೀಕರಿಸಿದ ನೂತನ ಸದಸ್ಯರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಶುಭಹಾರೈಸಿದರು.

ಈ ಸಂದರ್ಭ ಮಾತನಾಡಿದ ಅವರು ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್‌ ನೂತನ ಶಾಸಕರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲಿ ಹಾಗೂ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌, ವಿಧಾನ ಪರಿಷತ್‌ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹಾಗೂ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular