Tuesday, May 20, 2025
Google search engine

Homeರಾಜ್ಯಸುದ್ದಿಜಾಲನಾಳೆ ಸಿಎಂ ಸಿದ್ದರಾಮಯ್ಯ ಹುಟ್ಟು ಹಬ್ಬ ಹಿನ್ನೆಲೆ:ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆ

ನಾಳೆ ಸಿಎಂ ಸಿದ್ದರಾಮಯ್ಯ ಹುಟ್ಟು ಹಬ್ಬ ಹಿನ್ನೆಲೆ:ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆ

ಪಿರಿಯಾಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಅಂಗವಾಗಿ ಆ.12 ಶನಿವಾರದಂದು ಪಿರಿಯಾಪಟ್ಟಣದಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಗುವುದು ಎಂದು ತಾಲೂಕು ಕುರುಬ ಸಮಾಜ ಯುವ ಘಟಕದ ಅಧ್ಯಕ್ಷ ಪಂಚವಳ್ಳಿ ಲೋಹಿತ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 9:30 ಕ್ಕೆ ಪಟ್ಟಣದ ಹೌಸಿಂಗ್ ಬೋರ್ಡ್ ನಲ್ಲಿರುವ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ತಾಲೂಕು ಕುರುಬ ಸಂಘ ಅಧ್ಯಕ್ಷರಾದ ಟಿ.ಡಿ ಗಣೇಶ್ ಕೆಪಿಸಿಸಿ ಸದಸ್ಯರಾದ ನಿತಿನ್ ವೆಂಕಟೇಶ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ನಡೆಯಲಿದೆ ಬಳಿಕ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ಹಾಲು ವಿತರಿಸಲಾಗುವುದು.
ತಾಲೂಕಿನ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಹಾಗೂ ಸದಸ್ಯರು ವಿವಿಧ ಸಮಾಜ ಮುಖಂಡರು ಮಹಿಳಾ ಮುಖಂಡರು ಯುವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular