Thursday, July 2, 2026
Google search engine

Homeರಾಜ್ಯಮಡಪಟ್ಟಣ ಗಣಿ ದುರಂತ ; ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿರಬಹುದು : ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮಡಪಟ್ಟಣ ಗಣಿ ದುರಂತ ; ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿರಬಹುದು : ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು ದಕ್ಷಿಣ : ತಾಲೂಕಿನ ಮಡಪಟ್ಟಣದಲ್ಲಿರುವ ಕಲ್ಲುಕ್ವಾರಿಯಲ್ಲಿ ಸಂಭವಿಸಿದ ಕುಸಿತ ದುರಂತದಲ್ಲಿ ಸುಮಾರು ಎಂಟು ಮಂದಿ ಮೃತಪಟ್ಟಿರುವ ಶಂಕೆ ಇದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಘಟನೆ ಸ್ಥಳದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಪರಿಸ್ಥಿತಿಯ ಸಂಪೂರ್ಣ ಮೌಲ್ಯಮಾಪನ ನಡೆಯುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಎಂಟು ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದರು.

ಮೃತರಲ್ಲಿ ಹೆಚ್ಚಿನವರು ಇತರೆ ರಾಜ್ಯದವರಾಗಿದ್ದು, ಒಬ್ಬರು ಕರ್ನಾಟಕದವರು ಎಂದು ತಿಳಿದುಬಂದಿದೆ. ಘಟನೆಯ ಕುರಿತು ವಿವರವಾದ ವರದಿಗಾಗಿ ಕಾಯಲಾಗುತ್ತಿದೆ ಎಂದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದು, ಪ್ರಾಥಮಿಕವಾಗಿ ಇದು ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತವಾಗಿರಬಹುದು ಎಂದು ಶಂಕಿಸಲಾಗಿದೆ. ಗಣಿ ಹಾಗೂ ಗೃಹ ಇಲಾಖೆಗಳು ಸಂಯುಕ್ತವಾಗಿ ತನಿಖೆ ನಡೆಸುತ್ತಿವೆ ಎಂದು ಸಚಿವರು ತಿಳಿಸಿದರು.

RELATED ARTICLES
- Advertisment -
Google search engine

Most Popular