Friday, July 3, 2026
Google search engine

Homeರಾಜಕೀಯನಾ ಬರೋವರೆಗೂ ಕನಕಪುರದಲ್ಲಿ ಕರೆಂಟ್‌ ಇತ್ತೇನಪ್ಪಾ? : ಡಿಕೆಶಿ–ಹೆಚ್‌ಡಿಕೆ ನಡುವೆ ರಾಮನಗರ ಅಭಿವೃದ್ಧಿ ಕ್ರೆಡಿಟ್ ಫೈಟ್

ನಾ ಬರೋವರೆಗೂ ಕನಕಪುರದಲ್ಲಿ ಕರೆಂಟ್‌ ಇತ್ತೇನಪ್ಪಾ? : ಡಿಕೆಶಿ–ಹೆಚ್‌ಡಿಕೆ ನಡುವೆ ರಾಮನಗರ ಅಭಿವೃದ್ಧಿ ಕ್ರೆಡಿಟ್ ಫೈಟ್

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿಚಾರದ ಹಿನ್ನೆಲೆದಲ್ಲಿ ರಾಜ್ಯ ರಾಜಕೀಯದಲ್ಲಿ ಮತ್ತೆ ಡಿ.ಕೆ.ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವೆ ವಾಗ್ವಾದ ತೀವ್ರಗೊಂಡಿದ್ದು, ರಾಮನಗರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ಅಭಿವೃದ್ಧಿಗೆ ಯಾರ ಕೊಡುಗೆ ಹೆಚ್ಚು ಎಂಬ ಪ್ರಶ್ನೆ ಇದೀಗ ರಾಜಕೀಯ ಕಾಳಗಕ್ಕೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ತಮ್ಮ ಅಧಿಕಾರಾವಧಿಯಲ್ಲಿ ರಾಮನಗರ ಹಾಗೂ ಕನಕಪುರ ಭಾಗಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಪ್ರತಿಪಾದಿಸಿದ್ದು, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಡಿಮೆಯಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ನಾನು ಮುಖ್ಯಮಂತ್ರಿಯಾದ ಬಳಿಕ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕುಡಿಯುವ ನೀರು, ರಸ್ತೆ ಹಾಗೂ ವಿದ್ಯುತ್ ಸೇರಿದಂತೆ ಹಲವು ಮೂಲಸೌಕರ್ಯ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನೊಂದೆಡೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪ್ರತಿಕ್ರಿಯೆಯಲ್ಲಿ, ತಮ್ಮ ರಾಜಕೀಯ ಪ್ರವೇಶಕ್ಕೂ ಮೊದಲು ರಾಮನಗರ ಜಿಲ್ಲೆಯ ಸ್ಥಿತಿ ಹದಗೆಟ್ಟಿತ್ತು ಎಂದು ಹೇಳಿದ್ದಾರೆ. ರಸ್ತೆ, ವಿದ್ಯುತ್ ಹಾಗೂ ನೀರಿನ ಕೊರತೆ ಗಂಭೀರವಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದಿದ್ದು ಯಾವ ಅವಧಿಯಲ್ಲಿ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದು, ಇಬ್ಬರು ನಾಯಕರ ನಡುವಿನ ಈ ಹೇಳಿಕೆ–ಪ್ರತಿ ಹೇಳಿಕೆಗಳಿಂದ ರಾಮನಗರ ಅಭಿವೃದ್ಧಿ ವಿಚಾರ ಇದೀಗ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ.

RELATED ARTICLES
- Advertisment -
Google search engine

Most Popular