ಮೈಸೂರು: ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠದ ಶಾಖೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇಗುಲದಲ್ಲಿ ಸೌರಮಾನ ಶ್ರೀ ಲಕ್ಷ್ಮೀನರಸಿಂಹ ಜಯಂತಿಯು ಇತ್ತೀಚೆಗೆ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಮಂದಿ ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು. ಬಡಾವಣೆಯಲ್ಲಿ ಸುಮಾರು ವರ್ಷಗಳಿಂದ ಇರುವ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಜಯಂತಿ ಅಂಗವಾಗಿ ತಳಿರು ತೋರಣಗಳಿಂದ ಸಿಂಗರಿಸಿ, ರಂಗೋಲಿ ಬಿಡಿಸಿ, ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಿ ದೇವರ ಉತ್ಸವ ಮೂರ್ತಿಯನ್ನು ಕೂರಿಸಿ, ದೇವಸ್ಥಾನದ ಮುಂಭಾಗದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾದ್ಯ, ಇತರ ವೇದಗೋಷ್ಠಿಗಳೊಂದಿಗೆ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ವಿವಿಧ ಹೂವಿನಿಂದ ಅಲಂಕೃತಗೊಂಡ ತೀರುವೀದಿ ಸ್ವಾಮಿ ಉತ್ಸವ ಮೂರ್ತಿಯನ್ನು ಬಡಾವಣೆಯ ಪ್ರಮುಖ ಬೀದಿಗಳಲ್ಲಿ ಎಳೆಯುವ ಮೂಲಕ ಮೆರವಣಿಗೆ ನಡೆಸಲಾಯಿತು.
ದಾರಿಯುದ್ದಕ್ಕೂ ತೆಂಗಿನಕಾಯಿ ಇಡುಗಾಯಿ ಹೊಡೆದು ಭಕ್ತರು ಹರಕೆ ತೀರಿಸಿದರು. ದೇವಸ್ಥಾನಕ್ಕೆ ಬಂದ ನಂತರ ಸ್ವಾಮಿಗೆ ನೈವೇದ್ಯ ಸಲ್ಲಿಸಿ, ಮಹಾಮಂಗಳಾರತಿ ಮಾಡಿ, ತೀರ್ಥ, ಪ್ರಸಾದ ವಿನಿಯೋಗ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಹಾಗೂ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಭಾಗವಹಿಸಿದ್ದರು. ವೀರುರಾಘವನ್, ಕರಗಂ ರಾಮಪ್ರಿಯ, ರಾಮು (ಮೇಲುಕೋಟೆ), ತಾತಾಚಾರ್, ವಾಸುಕಿ, ಕೆ.ಆರ್.ಯೋಗನರಸಿಂಹನ್ (ಮುರುಳಿ), ವಿಶ್ವನಾಥ್, ಸಾಯಿರಾಂ ಹಾಗೂ ಮುಂತಾದವರು ಕಾಂiiಕ್ರಮದಲ್ಲಿ ಪಾಲ್ಗೊಂಡಿದ್ದರು.