Friday, July 3, 2026
Google search engine

HomeರಾಜಕೀಯSIR ಅಕ್ರಮ ಆರೋಪ : ಜೆಡಿಎಸ್ ನಿಯೋಗದಿಂದ ಸಿಇಒಗೆ ದೂರು

SIR ಅಕ್ರಮ ಆರೋಪ : ಜೆಡಿಎಸ್ ನಿಯೋಗದಿಂದ ಸಿಇಒಗೆ ದೂರು

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಜೆಡಿಎಸ್ ನಿಯೋಗ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದು, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶೇಷಾದ್ರಿಪುರಂನ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಗೆ ಭೇಟಿ ನೀಡಿದ ಜೆಡಿಎಸ್ ನಾಯಕರು, SIR ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಗಳು ನಡೆಯುತ್ತಿರುವ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದರು.

ಇದೇ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮಾತನಾಡಿ, ಪ್ರಕ್ರಿಯೆ ಆರಂಭವಾಗಿ ಕೇವಲ ಮೂರು ದಿನಗಳಾಗಿದ್ದರೂ, ಕೆಲವೆಡೆ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಸ್ಥಳಗಳಲ್ಲಿ ಕುಳಿತು SIR ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಇದರ ಹಿಂದೆ ಸಂಘಟಿತ ಜಾಲವಿರುವ ಶಂಕೆ ವ್ಯಕ್ತಪಡಿಸಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ಅರಕಲಗೂಡು ಶಾಸಕ ಎ.ಮಂಜು ತಮ್ಮ ಕ್ಷೇತ್ರದಲ್ಲಿಯೂ ನಿಯಮಗಳ ಉಲ್ಲಂಘನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ನಿಯಮದ ಪ್ರಕಾರ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ತೆರಳಿ ಫಾರಂ ವಿತರಿಸಬೇಕಾದರೂ, ಕೆಲವು ಕಡೆ ಮಕ್ಕಳ ಕೈಯಲ್ಲಿ ಫಾರಂಗಳನ್ನು ಕಳುಹಿಸಲಾಗುತ್ತಿದೆ ಎಂದು ಅವರು ಗಂಭೀರ ಆಕ್ಷೇಪ ವ್ಯಕ್ತಪಡಿಸಿದರು.

ಈ ಕುರಿತು ತಾವು ಈಗಾಗಲೇ ತಹಶೀಲ್ದಾರ್ ಹಾಗೂ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ತಿಳಿಸಿದ ಅವರು, ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular