Friday, July 3, 2026
Google search engine

Homeರಾಜ್ಯಸುದ್ದಿಜಾಲಮುಮ್ಮಡಿ ನಿರ್ವಾಣ ಸ್ವಾಮೀಜಿ ಪುಣ್ಯಸ್ಮರಣೆ : ಸಿಎಂ ಸೇರಿ ಗಣ್ಯರ ಭಾಗಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಪುಣ್ಯಸ್ಮರಣೆ : ಸಿಎಂ ಸೇರಿ ಗಣ್ಯರ ಭಾಗಿ

ಕನಕಪುರ : ಪಟ್ಟಣದ ದೇಗುಲ ಮಠದಲ್ಲಿ ಆಯೋಜಿಸಿದ್ದ ಲಿಂಗೈಕ್ಯ ಮುಮ್ಮಡಿ ನಿರ್ವಾಣ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿ, ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ಸಹೋದರ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರೊಂದಿಗೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ, ಸ್ವಾಮೀಜಿ ಅವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಬೇಲಿಮಠದ ಶಿವರುದ್ರ ಸ್ವಾಮೀಜಿ ಹಾಗೂ ದೇಗುಲ ಮಠದ ಚನ್ನಬಸವ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ವಿ.ಸೋಮಣ್ಣ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಶಾಸಕರಾದ ಗಣೇಶ್ ಪ್ರಸಾದ್, ಶಿವಗಂಗಾ, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಅನ್ನದಾನಿ ಹಾಗೂ ಇತರರು ಇದ್ದರು.

RELATED ARTICLES
- Advertisment -
Google search engine

Most Popular