Saturday, July 4, 2026
Google search engine

Homeದೇಶಪೆರು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಕೈಕೊ ಫುಜಿಮೊರಿಗೆ ಪ್ರಧಾನಿ ಮೋದಿ ಅಭಿನಂದನೆ

ಪೆರು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಕೈಕೊ ಫುಜಿಮೊರಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಪೆರುವಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕೈಕೊ ಫುಜಿಮೊರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಭಾರತ ಮತ್ತು ಪೆರು ದೇಶಗಳ ನಡುವಿನ ಸುದೀರ್ಘಕಾಲದ ಸೌಹಾರ್ದಯುತ ಸಂಬಂಧವನ್ನು ಸ್ಮರಿಸಿರುವ ಅವರು, ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಭಾರತ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.

‘ಎಕ್ಸ್’ ಮೂಲಕ ಶುಭ ಹಾರೈಕೆ

ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಪೆರುವಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಕೆಕೊ ಫುಜಿಮೊರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ಬರೆದಿದ್ದಾರೆ.

ದ್ವಿಪಕ್ಷೀಯ ಸಂಬಂಧ ಬಲಪಡಿಸಲು ಬದ್ಧತೆ

"ಭಾರತವು ಪೆರು ಜೊತೆಗಿನ ತನ್ನ ನಿಕಟ ಸ್ನೇಹಕ್ಕೆ ಅತ್ಯಂತ ಹೆಚ್ಚಿನ ಮಹತ್ವವನ್ನು ನೀಡುತ್ತದೆ. ವಿವಿಧ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ನಾವು ಬದ್ಧರಾಗಿದ್ದೇವೆ. ನಿಮ್ಮ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ನಾನು ಹಾರೈಸುತ್ತೇನೆ. ಉಭಯ ದೇಶಗಳ ಜನರ ಹಿತದೃಷ್ಟಿಯಿಂದ ನಮ್ಮ ಸಂಬಂಧಗಳನ್ನು ಮತ್ತಷ್ಟು ಆಳವಾಗಿಸಲು ನಿಮ್ಮೊಂದಿಗೆ ಜೊತೆಯಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ," ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. (ಏಜೆನ್ಸಿಸ್)
RELATED ARTICLES
- Advertisment -
Google search engine

Most Popular