ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರರು, ಸಮಾಜ ಸುಧಾರಕರು, ಹಸಿರು ಕ್ರಾಂತಿಯ ಹರಿಕಾರರು ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ. ಬಾಬು ಜಗಜೀವನ್ ರಾಮ್ ಅವರ 40ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೌರವ ನಮನ ಸಲ್ಲಿಸಿದರು .
ಈ ಸಂದರ್ಭ ಮಾತನಾಡಿದ ಅವರು ಸಮಾಜದ ಶೋಷಿತ, ದಲಿತ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಅವರು ಸಲ್ಲಿಸಿದ ಅಪ್ರತಿಮ ಸೇವೆ, ಸಾಮಾಜಿಕ ನ್ಯಾಯಕ್ಕಾಗಿ ನಡೆಸಿದ ಹೋರಾಟ ಹಾಗೂ ರಾಷ್ಟ್ರದ ಕೃಷಿ ಮತ್ತು ಆಡಳಿತ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳು ಸದಾ ಸ್ಮರಣೀಯ.
ಡಾ. ಬಾಬು ಜಗಜೀವನ್ ರಾಮ್ ಅವರ ಆದರ್ಶಗಳು ಮತ್ತು ಜನಪರ ಚಿಂತನೆಗಳು ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದು, ಅವರ ಕನಸಿನ ಸಮಾನತೆ ಮತ್ತು ಅಭಿವೃದ್ಧಿಯ ಭಾರತ ನಿರ್ಮಾಣಕ್ಕೆ ಬದ್ಧತೆಯಿಂದ ನಾವೆಲ್ಲರೂ ಕಾರ್ಯನಿರ್ವಹಿಸೋಣ ಎಂದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹಾಗೂ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



