Monday, July 6, 2026
Google search engine

Homeಸ್ಥಳೀಯಮಸೀದಿಗಳಲ್ಲಿ ನಡೆಯುತ್ತಿರುವ ಎಸ್‌ ಆರ್‌ ಐ ಪ್ರಕ್ರಿಯೆಗೆ ಪ್ರತಾಪ್ ಸಿಂಹ ಆಕ್ಷೇಪ

ಮಸೀದಿಗಳಲ್ಲಿ ನಡೆಯುತ್ತಿರುವ ಎಸ್‌ ಆರ್‌ ಐ ಪ್ರಕ್ರಿಯೆಗೆ ಪ್ರತಾಪ್ ಸಿಂಹ ಆಕ್ಷೇಪ

ಮೈಸೂರು : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಿಯಮಾನುಸಾರವಾಗಿ ಮನೆ ಮನೆಗೆ ತೆರಳಿ ನಡೆಸಬೇಕು, ಅದನ್ನು ಬಿಟ್ಟು ಮಸೀದಿಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಬಾರದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಪಾರದರ್ಶಕವಾಗಿರಬೇಕು ಎಂದು ಒತ್ತಾಯಿಸಿದರು.

“ಹಿಂದೂಗಳ ಕಾಲೋನಿಗಳಲ್ಲಿ ದೇವಸ್ಥಾನದ ಬಳಿ ಎಸ್‌ ಐಆರ್ (SIR) ಅರ್ಜಿಗಳನ್ನು ಸ್ವೀಕರಿಸುವುದು ಎಲ್ಲಿಯೂ ಕಂಡುಬಂದಿಲ್ಲ. ಆದರೆ, ಕೆಲವು ಮುಸ್ಲಿಂ ಕಾಲೋನಿಗಳಲ್ಲಿ ಮಸೀದಿಗಳ ಮೂಲಕ ಅರ್ಜಿ ಪ್ರಕ್ರಿಯೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ. ಇದು ಸರಿಯಾದ ಕ್ರಮವಲ್ಲ,” ಎಂದು ಅವರು ಟೀಕಿಸಿದರು.

ಬಿಎಲ್‌ಒಗಳು (BLO) ಕಡ್ಡಾಯವಾಗಿ ಪ್ರತಿಯೊಂದು ಮನೆಗೆ ಭೇಟಿ ನೀಡಿ, ಮನೆಯ ಯಜಮಾನರಿಂದ ಮಾಹಿತಿ ಹಾಗೂ ಸಹಿ ಪಡೆಯಬೇಕು. ಈ ಪ್ರಕ್ರಿಯೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವುದು ಸಲ್ಲದು ಎಂದು ಅವರು ಅಭಿಪ್ರಾಯಪಟ್ಟರು.

ಕೋವಿಡ್ ಕಾರಣದಿಂದ ಜನಗಣತಿ ನಡೆಯದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಅತ್ಯಗತ್ಯವಾಗಿದೆ. ಮತದಾರರ ಪಟ್ಟಿಯಿಂದ ಮೃತಪಟ್ಟವರ, ವಲಸೆ ಹೋದವರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರ ಮಾಹಿತಿಯನ್ನು ಸರಿಪಡಿಸುವುದು ಈ ಪ್ರಕ್ರಿಯೆಯ ಮುಖ್ಯ ಉದ್ದೇಶ ಎಂದು ವಿವರಿಸಿದರು.

ಬಿಎಲ್‌ಒಗಳ ಮೇಲೆ ಕೆಲಸದ ಒತ್ತಡ ಹೆಚ್ಚಿರುವ ಬಗ್ಗೆ ಗಮನ ಸೆಳೆದ ಅವರು, ಅಗತ್ಯಬಿದ್ದರೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ವಯಸ್ಸಾದ ಅಥವಾ ನಿವೃತ್ತಿಯ ಹಂತದಲ್ಲಿರುವ ಬಿಎಲ್‌ಒಗಳಿಗೆ ಮನೆ ಮನೆಗೆ ತೆರಳಿ ಕೆಲಸ ಮಾಡುವುದು ಕಷ್ಟಕರವಾಗಿದೆ ಎಂದರು.

ಮೈಸೂರಿನಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಮತದಾನದ ಹಕ್ಕನ್ನು ಕೇವಲ ಒಂದೇ ಕ್ಷೇತ್ರದಲ್ಲಿ ಉಳಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆ ಹಾಗೂ ಮೈಸೂರು ಎರಡೂ ಕಡೆ ಮತದಾರರಾಗಿ ನೋಂದಾಯಿಸಿಕೊಳ್ಳಬಾರದು ಎಂದು ಅವರು ಮನವಿ ಮಾಡಿದರು.

ಈ ವಿಷಯದಲ್ಲಿ ಗೃಹ ಸಚಿವರಿಗೆ ಸಮರ್ಪಕ ಮಾಹಿತಿ ಇಲ್ಲವೆಂದು ಟೀಕಿಸಿದ ಪ್ರತಾಪ್ ಸಿಂಹ, ಮತದಾರರ ಪಟ್ಟಿಯಿಂದ ನಕಲಿ ಹಾಗೂ ಅನರ್ಹ ಹೆಸರುಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಮರೋಪಾದಿಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿದರು.

RELATED ARTICLES
- Advertisment -
Google search engine

Most Popular