ಕಲಬುರಗಿ : ಇಲ್ಲಿನ ಆರಾಧ್ಯದೈವ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭೇಟಿ ನೀಡಿ ಶರಣರ ದರುಶನ ಪಡೆದು ಪೂಜೆ ಸಲ್ಲಿಸಿದರು.
ಮಂಗಳವಾರ ಹಿಂದಿನ ಪೀಠಾಧಿಪತಿ ಪೂಜ್ಯ ಶರಣಬಸವಪ್ಪ ಅಪ್ಪ ಅವರ ಗದ್ದುಗೆಗೆ ಸಿಎಂ ಡಿ ಕೆ ಶಿವಕುಮಾರ್ ಅವರು ನಮಿಸಿದರು.
ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಮತ್ತು ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಮತ್ತು ಬಸವರಾಜ ದೇಶಮುಖ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಡಿಸಿಎಂ ಡಾ. ಜಿ ಪರಮೇಶ್ವರ, ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಯು ಟಿ ಖಾದರ್, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.



