ಮೈಸೂರು: ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್ ಗೌಡ ಅವರ ಪತ್ನಿ ವರ್ಷಾ ಹರೀಶ್ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ ವ್ಯಕ್ತಿಯ ವಿರುದ್ಧ ಕೊನೆಗೂ ಎಫ್‌ಐಆರ್ ದಾಖಲಾಗಿದೆ.
ವರ್ಷಾ ಹರೀಶ್ ಗೌಡ ನೀಡಿದ ದೂರಿನ ಮೇರೆಗೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರು ನೀಡಿದ 10 ದಿನಗಳಾದರೂ ಎಫ್‌ಐಆರ್ ದಾಖಲಾಗದ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಗೌಡ ದಂಪತಿ ತಡರಾತ್ರಿ ಠಾಣೆಗೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ಪೊಲೀಸರು ಕ್ರಮ ಕೈಗೊಂಡು ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.



