ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಮತದಾರರ ಮನೆಗೆ ತೆರಳಿದ್ದ ಬಿಎಲ್‌ಒಗೆ ಜಾತಿ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ.
ಎಸ್ಐಆರ್ ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ದಲಿತ ಸಮುದಾಯದ ಬಿಎಲ್‌ಒಗೆ ಯಶೋಧ ಆಚಾರಿ ಅವಮಾನ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಮನೆಯ ಅಂಗಳಕ್ಕೆ ಪ್ರವೇಶಿಸಿದ ವೇಳೆ, “ನಿಮ್ಮ ಜಾತಿಯವರು ಈ ಕಡೆ ಬರಬಾರದು” ಎಂದು ಹೇಳಿ ಒಳಗೆ ಬರದಂತೆ ತಡೆದು ಜಾತಿ ನಿಂದನೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



