Thursday, July 9, 2026
Google search engine

Homeರಾಜ್ಯಸುದ್ದಿಜಾಲಕರ್ನಾಟಕದಲ್ಲಿ ಮುಂಗಾರು ಆರ್ಭಟ: ಕರಾವಳಿ-ಮಲೆನಾಡಿಗೆ 2 ದಿನ ಯೆಲ್ಲೋ ಅಲರ್ಟ್, 3 ದಿನ ಭಾರೀ ಮಳೆ...

ಕರ್ನಾಟಕದಲ್ಲಿ ಮುಂಗಾರು ಆರ್ಭಟ: ಕರಾವಳಿ-ಮಲೆನಾಡಿಗೆ 2 ದಿನ ಯೆಲ್ಲೋ ಅಲರ್ಟ್, 3 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬರಗಾಲದಿಂದ ಬಸವಳಿದ್ದ ಕರ್ನಾಟಕದಲ್ಲಿ ಈಗ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿ ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಲತಾ ಮಾಹಿತಿ ನೀಡಿದ್ದು, ಕರಾವಳಿ ಜಿಲ್ಲೆಗಳು, ಹಾಸನ, ಶಿವಮೊಗ್ಗ, ಮಡಿಕೇರಿ ಮತ್ತು ಬೆಳಗಾವಿ ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಈ ಭಾಗಗಳಿಗೆ ಇನ್ನೂ 2 ದಿನಗಳ ಕಾಲ ಯಲ್ಲೋ ಅಲಟ್೯  ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.  

3 ದಿನಗಳ ಬಳಿಕ ಈ ಭಾಗಗಳಲ್ಲಿ ಹಂತ-ಹಂತವಾಗಿ ಮಳೆ ಕಡಿಮೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ರಾಯಚೂರು, ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಇನ್ನೂ 10 ದಿನಗಳ ವರೆಗೂ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ.

ಈ ಭಾಗಗಳಲ್ಲಿ ಮಳೆ ಸಾಧ್ಯತೆ ಕಡಿಮೆ, ಮಳೆ ಬಂದರೂ ಕೂಡ ಮಳೆಯ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.  

RELATED ARTICLES
- Advertisment -
Google search engine

Most Popular