ಗುಂಡ್ಲುಪೇಟೆ: ತಾಲೂಕಿನ ಚಿಕ್ಕಾಟಿ ಗ್ರಾಮದ ನಿವಾಸಿ ಮಹದೇವಸ್ವಾಮಿ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅವರು ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ 60 ಸಾವಿರ ರೂ. ಚೆಕ್ ನೀಡಿ ಮಾನವೀಯತೆ ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು ಶಾಸಕರ ನೆರವಿಗೆ ಕೃತಜ್ಞತೆ ಸಲ್ಲಿಸಿದರು. ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಮೂಲಕ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅವರು ಮಾನವೀಯ ಕಾಳಜಿ ತೋರಿದ್ದಾರೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.



