Saturday, July 11, 2026
Google search engine

Homeರಾಜಕೀಯಪ್ರಿಯಾಂಕ್ ಖರ್ಗೆ ಮೊದಲು ಗೃಹ ಸಚಿವರಂತೆ ಕೆಲಸ ಮಾಡಲಿ : ಜನಾರ್ಧನ ರೆಡ್ಡಿ

ಪ್ರಿಯಾಂಕ್ ಖರ್ಗೆ ಮೊದಲು ಗೃಹ ಸಚಿವರಂತೆ ಕೆಲಸ ಮಾಡಲಿ : ಜನಾರ್ಧನ ರೆಡ್ಡಿ

ಕೊಪ್ಪಳ : ಆರ್‌ಎಸ್‌ಎಸ್ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಶಾಸಕ ಜನಾರ್ಧನ ರೆಡ್ಡಿ, ಸಚಿವರು ತಮ್ಮ ಹುದ್ದೆಯ ಜವಾಬ್ದಾರಿಯನ್ನು ಅರಿತು ನಡೆದುಕೊಳ್ಳಬೇಕು ಎಂದು ತೀವ್ರ ವಾಗ್ದಾಳಿ ನಡೆಸಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಪಡೆಯಬೇಕು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಯನ್ನು ಟೀಕಿಸಿ, ಪ್ರತಿದಿನ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಅವರು ನಿರಂತರವಾಗಿ ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಹತ್ವದ ಗೃಹ ಸಚಿವ ಸ್ಥಾನವನ್ನು ನೀಡಿರುವಾಗ, ಕಾನೂನು ಮತ್ತು ಸುವ್ಯವಸ್ಥೆಯಂತಹ ವಿಷಯಗಳಿಗೆ ಆದ್ಯತೆ ನೀಡುವ ಬದಲು ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ರೆಡ್ಡಿ ಹೇಳಿದರು.

ಇನ್ನೂ ಗೃಹ ಸಚಿವರಾಗಿ ಕೆಲಸ ಮಾಡುವುದನ್ನು ಬಿಟ್ಟು ಈ ರೀತಿಯ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಮೊದಲು ಗೃಹ ಸಚಿವರಂತೆ ವರ್ತಿಸಬೇಕು ಎಂದು ಅವರು ಹೇಳಿದರು.

ಇದೇ ವೇಳೆ ಪ್ರಿಯಾಂಕ್ ಖರ್ಗೆ ಕುರಿತು ವೈಯಕ್ತಿಕ ಟೀಕೆಯನ್ನೂ ಮಾಡಿದ ಜನಾರ್ಧನ ರೆಡ್ಡಿ, 15 ದಿನ ಅವರನ್ನು ಅವರ ಪಾಡಿಗೆ ಬಿಡಬೇಕು. ಬಳಿಕ ನಿಮ್ಹಾನ್ಸ್‌ಗೆ ದಾಖಲಿಸಿ ಅವರ ತಲೆ ಸರಿಯಾಗಿದೆಯೇ ಎಂದು ಪರೀಕ್ಷೆ ಮಾಡಿಸಬೇಕು. ಗೃಹ ಸಚಿವರಾಗಿ ಕೆಲಸ ಮಾಡುವುದನ್ನು ಬಿಟ್ಟು ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ಆರ್‌ಎಸ್‌ಎಸ್ ಬಗ್ಗೆ ಮಾತನಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಆರ್‌ಎಸ್‌ಎಸ್‌ಗೆ ಇದುವರೆಗೆ ಯಾರಿಂದಲೂ ಏನೂ ಮಾಡಲು ಸಾಧ್ಯವಾಗಿಲ್ಲ. ಪ್ರಿಯಾಂಕ್ ಖರ್ಗೆ ಅವರಿಂದಲೂ ಏನೂ ಮಾಡಲು ಸಾಧ್ಯವಿಲ್ಲ ಎಂಬುದು ಗೊತ್ತಿದ್ದರೂ ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ರೆಡ್ಡಿ ಆರೋಪಿಸಿದರು.

RELATED ARTICLES
- Advertisment -
Google search engine

Most Popular