Saturday, July 11, 2026
Google search engine

Homeರಾಜ್ಯಸುದ್ದಿಜಾಲಖ್ಯಾತ ಗಾಯಕಿ ಎಸ್. ಜಾನಕಿ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಸಂತಾಪ

ಖ್ಯಾತ ಗಾಯಕಿ ಎಸ್. ಜಾನಕಿ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಸಂತಾಪ

​ಬೆಂಗಳೂರು: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹೆಮ್ಮೆಯ ಗಾಯಕಿ, ಗಾನ ಕೋಗಿಲೆ ಎಂದೇ ಪ್ರಸಿದ್ಧರಾಗಿದ್ದ ಶ್ರೀಮತಿ ಎಸ್. ಜಾನಕಿ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಅಪರೂಪದ ಗಾನ ಕೋಗಿಲೆ. ದಶಕಗಳ ಕಾಲ ತಮ್ಮ ಸುಮಧುರ ಧ್ವನಿಯ ಮೂಲಕ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಕೇವಲ ಹಾಡುಗಾರಿಕೆಯಷ್ಟೇ ಅಲ್ಲದೆ, ಪ್ರಾಣಿ-ಪಕ್ಷಿಗಳ ಧ್ವನಿ, ಮಕ್ಕಳ ಧ್ವನಿಯನ್ನು ಲೀಲಾಜಾಲವಾಗಿ ಅನುಕರಿಸುತ್ತಿದ್ದ ಅವರ ಕಂಠಸಿರಿ ಅದ್ಭುತವಾಗಿತ್ತು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ ಅನನ್ಯ ಹಾಗೂ ಎಂದಿಗೂ ಮರೆಯಲಾಗದ್ದು,” ಎಂದು ಸ್ಮರಿಸಿದ್ದಾರೆ.

​ಅವರ ನಿಧನದಿಂದ ಸಂಗೀತ ಲೋಕದ ಸುವರ್ಣ ಯುಗವೊಂದು ಅಂತ್ಯಗೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಹಾಗೂ ಅವರ ಕುಟುಂಬದವರು, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಆಯುಕ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular