ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಶಾಸಕ ಜನಾರ್ದನ ರೆಡ್ಡಿ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮಗಳಲ್ಲಿ ನಿರಂತರವಾಗಿ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಿದ್ದು, ಜವಾಬ್ದಾರಿಯುತ ಸಚಿವರಂತೆ ನಡೆದುಕೊಳ್ಳುತ್ತಿಲ್ಲ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.
ಇನ್ನೂ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಇಲಾಖೆಯ ಕಾರ್ಯಗಳಿಗಿಂತ ಹೆಚ್ಚಾಗಿ ಆರ್‌ಎಸ್‌ಎಸ್ ಸಂಘಟನೆಯನ್ನು ಟೀಕಿಸುವುದನ್ನೇ ಪ್ರಿಯಾಂಕ್ ಖರ್ಗೆ ಮುಖ್ಯ ಕೆಲಸವನ್ನಾಗಿಸಿಕೊಂಡಿದ್ದಾರೆ ಎಂದು ಟೀಕಿಸಿದರು. ತಿದಿನ ಟಿವಿ ಮತ್ತು ಪತ್ರಿಕೆಗಳ ಹೆಡ್‌ಲೈನ್‌ನಲ್ಲಿ ಇರಬೇಕೆಂಬ ಹಠದಿಂದಲೇ ಅವರು ನಿರಂತರವಾಗಿ ಆರ್‌ಎಸ್‌ಎಸ್ ವಿರುದ್ಧ ಮಾತನಾಡುತ್ತಿದ್ದಾರೆ. ಅವರಿಗೆ ನೀಡಿರುವ ಜವಾಬ್ದಾರಿಯ ಘನತೆ ಕಾಪಾಡುವತ್ತ ಗಮನ ಹರಿಸಬೇಕು ಎಂದು ಹೇಳಿದರು.
ಇದೇ ವೇಳೆ ಪ್ರಿಯಾಂಕ್ ಖರ್ಗೆ ಅವರ ನಡವಳಿಕೆಯನ್ನು ವ್ಯಂಗ್ಯವಾಡಿದ ಜನಾರ್ದನ ರೆಡ್ಡಿ, “ಇನ್ನೂ ಕೆಲವು ದಿನ ಅವರ ಹೇಳಿಕೆಗಳನ್ನು ಗಮನಿಸುತ್ತೇವೆ. ಅದಾದ ಬಳಿಕವೂ ಇದೇ ರೀತಿಯ ಹೇಳಿಕೆಗಳು ಮುಂದುವರಿದರೆ, ಅವರ ಮಾನಸಿಕ ಸ್ಥಿತಿ ಪರಿಶೀಲನೆಗಾಗಿ ನಿಮ್ಹಾನ್ಸ್‌ಗೆ ಕರೆದೊಯ್ಯಬೇಕಾದ ಪರಿಸ್ಥಿತಿ ಬರಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಳೆಯ ರಾಜಕೀಯ ಇತಿಹಾಸವನ್ನು ಉಲ್ಲೇಖಿಸಿದ ಅವರು, ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಅವರಂತಹ ಪ್ರಧಾನಿಗಳಿಗೂ, ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆರ್‌ಎಸ್‌ಎಸ್ ಅನ್ನು ಏನೂ ಮಾಡಲು ಸಾಧ್ಯವಾಗಲಿಲ್ಲ. ಈಗ ಪ್ರಿಯಾಂಕ್ ಖರ್ಗೆ ಅವರು ಅದನ್ನು ನಿರ್ಮೂಲನೆ ಮಾಡುತ್ತಾರೆ ಎನ್ನುವುದು ಸಾಧ್ಯವೇ? ಎಂದು ಪ್ರಶ್ನಿಸಿದರು.



