Sunday, July 12, 2026
Google search engine

Homeರಾಜ್ಯನೀಟ್‌ ಅಕ್ರಮ ವಿರೋಧಿಸಿ ಯುವ ಕಾಂಗ್ರೆಸ್‌ ಸೈಕಲ್‌ ಜಾಥಾ : ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಬಿ.ಕೆ.ಹರಿಪ್ರಸಾದ್‌...

ನೀಟ್‌ ಅಕ್ರಮ ವಿರೋಧಿಸಿ ಯುವ ಕಾಂಗ್ರೆಸ್‌ ಸೈಕಲ್‌ ಜಾಥಾ : ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಬಿ.ಕೆ.ಹರಿಪ್ರಸಾದ್‌ ಆಗ್ರಹ

ಬೆಂಗಳೂರು : ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಯುವ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಸೈಕಲ್‌ ಜಾಥಾಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆಹರಿಪ್ರಸಾದ್‌ ಚಾಲನೆ ನೀಡಿದರು.

ಕೆಪಿಸಿಸಿ ಕಚೇರಿಯಿಂದ ಕೆ.ಆರ್‌.ಸರ್ಕಲ್‌ ಮಾರ್ಗವಾಗಿ ಗಾಂಧಿ ಪ್ರತಿಮೆವರೆಗೆ ನಡೆದ ಜಾಥಾದಲ್ಲಿ ಬಿ.ಕೆ.ಹರಿಪ್ರಸಾದ್‌ ಅವರು ಸ್ವತಃ ಸೈಕಲ್‌ ಅವರು ಖುದ್ದು ಸೈಕಲ್‌ ತುಳಿಯುವ ಮೂಲಕ ಚಾಲನೆ ನೀಡಿದರು. ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ರಾಜೀನಾಮೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಳಿಕ ಮಾತನಾಡಿದ ಬಿ.ಕೆ.ಹರಿಪ್ರಸಾದ್‌, ಯುವ ಕಾಂಗ್ರೆಸ್‌ ಮತ್ತು ವಿದ್ಯಾರ್ಥಿ ಘಟಕಗಳ ವತಿಯಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸೈಕಲ್‌ ಜಾಥಾ ಆಯೋಜಿಸಲಾಗಿದೆ. ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳಿಗೆ ಧಕ್ಕೆಯಾಗಿದೆ. ಯುವಜನರ ಆತ್ಮಸ್ಥೈರ್ಯ ಕುಗ್ಗಬಾರದು, ಅವರು ಭವಿಷ್ಯದ ಬಗ್ಗೆ ವಿಶ್ವಾಸದಿಂದ ಮುನ್ನಡೆಯಬೇಕು ಎಂಬ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಧ್ವನಿಯಾಗಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ರಾಹುಲ್‌ ಗಾಂಧಿ ಚಾಲನೆ ನೀಡಿದ್ದಾರೆ. ರಾಜ್ಯದ ವಿದ್ಯಾರ್ಥಿಗಳಲ್ಲೂ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹರಿಪ್ರಸಾದ್‌ ಹೇಳಿದರು.

ಇದೇ ವೇಳೆ ಖ್ಯಾತ ಗಾಯಕಿ ಎಸ್‌.ಜಾನಕಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ಜಾನಕಮ್ಮ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಅವರ ಹಾಡುಗಳನ್ನು ಕೇಳದವರು ಯಾರೂ ಇಲ್ಲ. ಅವರ ಅಗಲಿಕೆಯಿಂದ ಸಂಗೀತ ಲೋಕದಲ್ಲಿ ಕರಾಳ ಛಾಯೆ ಮೂಡಿದೆ ಎಂದು ಹೇಳಿದರು.

ಎಸ್‌ಐಆರ್‌ ಸೇರಿದಂತೆ ವಿವಿಧ ವಿಚಾರಗಳ ಕುರಿತು ಬಿಜೆಪಿ ಮುಖಂಡರ ಹೇಳಿಕೆಗಳಿಗೆ ಮುಂದಿನ ದಿನಗಳಲ್ಲಿ ಪ್ರತಿಕ್ರಿಯಿಸುವುದಾಗಿ ಬಿ.ಕೆ.ಹರಿಪ್ರಸಾದ್‌ ತಿಳಿಸಿದರು.

RELATED ARTICLES
- Advertisment -
Google search engine

Most Popular