Monday, July 13, 2026
Google search engine

Homeರಾಜ್ಯಸುದ್ದಿಜಾಲಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳ ಸಹಕಾರ ಅಗತ್ಯ : ಎಸ್‌ಡಿಎಂಸಿ ಅಧ್ಯಕ್ಷ ನಂಜುಂಡಪ್ಪ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳ ಸಹಕಾರ ಅಗತ್ಯ : ಎಸ್‌ಡಿಎಂಸಿ ಅಧ್ಯಕ್ಷ ನಂಜುಂಡಪ್ಪ

ಗುಡಿಬಂಡೆ : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳ ಸಹಕಾರ ಅತ್ಯಂತ ಅಗತ್ಯವಾಗಿದ್ದು, ಇಂತಹ ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು ಎಂದು ದಪ್ಪರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಂಜುಂಡಪ್ಪ ಹೇಳಿದರು.

ತಾಲೂಕಿನ ದಪ್ಪರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಡೆಲ್ ಟೆಕ್ನಾಲಜಿಸ್ ಹಾಗೂ ಯೂತ್ ಫಾರ್ ಸೇವಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಉಚಿತ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಮೂಲಕ ದಾನಿಗಳು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದ್ದಾರೆ. ಇಂತಹ ನೆರವಿನಿಂದ ವಿದ್ಯಾರ್ಥಿಗಳ ಕಲಿಕೆಯ ಆಸಕ್ತಿ ಹೆಚ್ಚುವುದರ ಜೊತೆಗೆ ಪೋಷಕರ ಮೇಲಿನ ಆರ್ಥಿಕ ಹೊರೆ ಕೂಡ ಕಡಿಮೆಯಾಗುತ್ತದೆ ಎಂದು ತಿಳಿಸಿದರು. ಸಮಾಜದ ಅಭಿವೃದ್ಧಿಯಲ್ಲಿ ದಾನಿಗಳ ಪಾತ್ರ ಮಹತ್ವದ್ದಾಗಿದ್ದು, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಇನ್ನಷ್ಟು ಮಂದಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಡೆಲ್ ಟೆಕ್ನಾಲಜಿಸ್ ಪ್ರತಿನಿಧಿ ಶ್ರೀನಾಥ್ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿದೆ. ಮುಂದಿನ ದಿನಗಳಲ್ಲಿಯೂ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು. ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯೂತ್ ಫಾರ್ ಸೇವಾ ಸಂಸ್ಥೆಯ ಸಂಯೋಜಕ ಹರೀಶ್, ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಡೆಲ್ ಟೆಕ್ನಾಲಜಿಸ್ ಮತ್ತು ಯೂತ್ ಫಾರ್ ಸೇವಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular