Monday, July 13, 2026
Google search engine

Homeದೇಶರೇವಣ್ಣ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಅಸಮಾಧಾನ : ನೋಟಿಸ್ ಜಾರಿ

ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಅಸಮಾಧಾನ : ನೋಟಿಸ್ ಜಾರಿ

ನವದೆಹಲಿ : ಶಾಸಕ ಹೆಚ್‌.ಡಿ.ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪಗಳಿವೆ, ಆದರೆ ಹೆಚ್‌.ಡಿ.ರೇವಣ್ಣ ವಿರುದ್ಧದ ಆರೋಪಗಳು ವಿಭಿನ್ನವಾಗಿವೆ. ಹೀಗಾಗಿ ಮಗನ ಮೇಲಿರುವ ಆರೋಪಗಳನ್ನು ಆಧರಿಸಿ ತಂದೆಯ ಮೇಲೂ ಅದೇ ಆರೋಪ ಹೊರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಹೆಚ್‌.ಡಿ.ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ಹಲ್ಲೆ ಆರೋಪಕ್ಕೆ ಸಂಬಂಧಿಸಿದ ಅಂಶಗಳನ್ನು ರದ್ದುಪಡಿಸಿ, ಲೈಂಗಿಕ ದೌರ್ಜನ್ಯ ಆರೋಪದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾ. ಪಾರ್ದಿವಾಲ ನೇತೃತ್ವದ ಪೀಠ, ವಿಚಾರಣೆ ವೇಳೆ ಹೈಕೋರ್ಟ್ ಆದೇಶದ ಬಗ್ಗೆ ಅಸಮಧಾನ ಹೊರಹಾಕಿದ್ದು, ಹಲ್ಲೆ ಪ್ರಕರಣವನ್ನು ರದ್ದುಪಡಿಸಿ, ಲೈಗಿಂಕ ದೌರ್ಜನ್ಯ ಮುಂದುವರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಹೈಕೋರ್ಟ್ ಆರೋಪಿಯ ವಿರುದ್ಧದ ಚಾರ್ಜ್‌ ಬದಲಾಯಿಸಿದ್ದೇಕೆ ಎಂದು ಪೀಠ ಪ್ರಶ್ನಿಸಿದೆ.

ಇನ್ನೂ ಮಗ ಪ್ರಜ್ವಲ್ ರೇವಣ್ಣ ಮೇಲೆ ಅತ್ಯಾಚಾರ ಆರೋಪವಿದೆ, ಚಾರ್ಜ್ ಫ್ರೇಮ್ ಆಗಿದೆ. ತಂದೆ ರೇವಣ್ಣ ಮೇಲೆ ಬೇರೆ ಆರೋಪಗಳಿವೆ. ಇಬ್ಬರ ಮೇಲೂ ಬೇರೆ ಬೇರೆ ಆರೋಪಗಳಿವೆ. ಒಂದೇ ಕೇಸ್ ಎಂದು ತಂದೆಗೂ ರೇಪ್ ಆರೋಪ ಹಾಕಲು ಬರುವುದಿಲ್ಲ ಎಂದು ಕೋರ್ಟ್‌ ಹೇಳಿದೆ. ಈ ಸಂಬಂಧ ಹೆಚ್‌.ಡಿ.ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

RELATED ARTICLES
- Advertisment -
Google search engine

Most Popular