Monday, July 13, 2026
Google search engine

Homeರಾಜಕೀಯದೇಶದ ನೀತಿಯನ್ನು ಟ್ರಂಪ್‌ಗೆ ಅಡವಿಟ್ಟಿದ್ದಾರೆ : ಮೋದಿ ಸರ್ಕಾರದ ವಿದೇಶಾಂಗ ನೀತಿ ವಿರುದ್ಧ ಪ್ರಿಯಾಂಕ್ ಖರ್ಗೆ...

ದೇಶದ ನೀತಿಯನ್ನು ಟ್ರಂಪ್‌ಗೆ ಅಡವಿಟ್ಟಿದ್ದಾರೆ : ಮೋದಿ ಸರ್ಕಾರದ ವಿದೇಶಾಂಗ ನೀತಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು : ಭಾರತದ ವಿದೇಶಾಂಗ ನೀತಿ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿದೇಶಾಂಗ ನೀತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಡವಿಟ್ಟು ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಕೇಂದ್ರ ಸರ್ಕಾರದ ನೀತಿಗಳನ್ನು ಪ್ರಶ್ನಿಸಿದರು.

ನಮ್ಮ ದೇಶದಲ್ಲಿ ವಿದೇಶಾಂಗ ಸಚಿವರು ಇದ್ದಾರೋ ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ. ನಮಗೆ ಸ್ಪಷ್ಟವಾದ ವಿದೇಶಾಂಗ ನೀತಿ ಇದೆಯೇ ಎಂಬುದೂ ಪ್ರಶ್ನೆಯಾಗಿದೆ. ಹಿಂದಿನ ಅಮೆರಿಕಇರಾನ್ ಸಂಘರ್ಷದ ಸಂದರ್ಭದಲ್ಲಿ ಭಾರತ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿತ್ತು ಎಂದು ಹೇಳಿದರು.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದಾಗ ದೇಶದಲ್ಲಿ ಇಂಧನ ಬೆಲೆ ಹೆಚ್ಚಿಸಲಾಗಿತ್ತು. ಆದರೆ ಬೆಲೆ ಇಳಿಕೆಯಾದ ಸಂದರ್ಭಗಳಲ್ಲಿ ಅದಕ್ಕೆ ಅನುಗುಣವಾಗಿ ಇಂಧನ ದರ ಕಡಿಮೆ ಮಾಡಲಿಲ್ಲ ಎಂದು ಅವರು ಆರೋಪಿಸಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಗಳ ಕುರಿತು ಟೀಕಿಸಿದ ಪ್ರಿಯಾಂಕ್ ಖರ್ಗೆ, ಪ್ರಧಾನಮಂತ್ರಿಗಳು ವಿದೇಶಗಳಿಗೆ ಹೋಗುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕಾಗಿ ಅಥವಾ ದೇಶದ ಹಿತಾಸಕ್ತಿಗಾಗಿ ನೀತಿ ರೂಪಿಸಲು? ಎಂದು ಪ್ರಶ್ನಿಸಿದರು.

ಸಾಲು ಸಾಲು ವಿದೇಶ ಪ್ರವಾಸಗಳು ಮತ್ತು ಜಾಗತಿಕ ಗೌರವಗಳಿಂದ ಸಾಮಾನ್ಯ ಭಾರತೀಯರಿಗೆ ಏನು ಪ್ರಯೋಜನವಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ತಿಳಿಸಬೇಕು. ಪ್ರಧಾನಿ ಮೋದಿ ಅವರ ವಿದೇಶ ಪ್ರವಾಸಗಳು ದೇಶದ ಜನರಿಗಿಂತ ಕೆಲವೇ ಉದ್ಯಮಿಗಳಿಗೆ ಹೆಚ್ಚು ಅನುಕೂಲ ಮಾಡಿಕೊಡುತ್ತಿವೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರದಿಂದ ಯಾವುದೇ ನಿರೀಕ್ಷೆ ಉಳಿದಿಲ್ಲ ಎಂದು ಟೀಕಿಸಿದರು.

RELATED ARTICLES
- Advertisment -
Google search engine

Most Popular