Tuesday, July 14, 2026
Google search engine

Homeರಾಜ್ಯಬಿಸಿಯೂಟ ಸೇವಿಸಿ ಮುಧೋಳ ಶಾಲೆಯ 14 ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಬಿಸಿಯೂಟ ಸೇವಿಸಿ ಮುಧೋಳ ಶಾಲೆಯ 14 ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಬಾಗಲಕೋಟೆ : ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಹಲವು ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಶಾಲೆಯಲ್ಲಿ ಎಲ್‌ಕೆಜಿಯಿಂದ 7ನೇ ತರಗತಿವರೆಗೆ ಒಟ್ಟು 51 ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿದ್ದು, ಅವರಲ್ಲಿ 14 ಮಕ್ಕಳಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಊಟ ಮಾಡಿದ ಕೆಲವೇ ಸಮಯದಲ್ಲಿ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಶಾಲಾ ಸಿಬ್ಬಂದಿ ತಕ್ಷಣವೇ ಅವರನ್ನು ಮುಧೋಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಸ್ವಸ್ಥಗೊಂಡ ಮಕ್ಕಳ ಪೈಕಿ 9 ವಿದ್ಯಾರ್ಥಿಗಳಿಗೆ ಮುಧೋಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂವರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಎಲ್ಲಾ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.

ಇನ್ನೂ ಈ ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಪರಿಶೀಲನೆ ನಡೆಸಿದ್ದು, ಬಿಸಿಯೂಟದಿಂದಲೇ ಅಸ್ವಸ್ಥತೆ ಉಂಟಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ವೇಳೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ವಸತಿ ನಿಲಯದ ಪ್ರಭಾರಿ ಪ್ರಾಂಶುಪಾಲೆ ನಜೀಮಾ ಬೇಗಂ ಹಾಗೂ ಪ್ರಭಾರಿ ವಾರ್ಡನ್ ಭೀಮಬಾಯಿ ಅವರನ್ನು ಅಮಾನತುಗೊಳಿಸಲಾಗಿದೆ.

RELATED ARTICLES
- Advertisment -
Google search engine

Most Popular