Tuesday, July 14, 2026
Google search engine

Homeರಾಜ್ಯಸಿಎಂ ಡಿಕೆಶಿ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್ ನೇಮಕ

ಸಿಎಂ ಡಿಕೆಶಿ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಧಾನ ಸಲಹೆಗಾರರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಸರ್ಕಾರದ ಪ್ರಕಟಣೆಯ ಪ್ರಕಾರ, ಯಾವುದೇ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರೆ ಸೌಲಭ್ಯಗಳಿಗೆ ಅರ್ಹತೆ ಇಲ್ಲದ ಗೌರವಾಧಾರಿತ ಆಧಾರದ ಮೇಲೆ ಈ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಲಹೆ ಮತ್ತು ಸಹಕಾರ ನೀಡುವ ಉದ್ದೇಶದಿಂದ ಜಿ.ಸಿ.ಚಂದ್ರಶೇಖರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿ.ಸಿ.ಚಂದ್ರಶೇಖರ್ ಅವರು ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದು, ಹಾಸನ ಮೂಲದವರು. ಬೆಂಗಳೂರಿನಲ್ಲಿ ನೆಲೆಸಿರುವ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರ ಅವಧಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಚಂದ್ರಶೇಖರ್, ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅವರ ಪಕ್ಷ ಸಂಘಟನೆ ಹಾಗೂ ಸೇವೆಯನ್ನು ಪರಿಗಣಿಸಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿಯೂ ನೇಮಕ ಮಾಡಲಾಗಿತ್ತು.

RELATED ARTICLES
- Advertisment -
Google search engine

Most Popular