Tuesday, July 14, 2026
Google search engine

Homeರಾಜಕೀಯರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ ; ಕುಡಿಯುವ ನೀರಿಗೆ ಮೊದಲ ಆದ್ಯತೆ : ಯತೀಂದ್ರ...

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ ; ಕುಡಿಯುವ ನೀರಿಗೆ ಮೊದಲ ಆದ್ಯತೆ : ಯತೀಂದ್ರ ಸಿದ್ದರಾಮಯ್ಯ

ಕಲಬುರಗಿ : ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ಇದನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಹೀಗಾಗಿ ಜಲಮೂಲಗಳು ಹಾಗೂ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಗಮನದಲ್ಲಿಟ್ಟುಕೊಂಡು ಮೊದಲ ಆದ್ಯತೆಯಾಗಿ ಕುಡಿಯುವ ನೀರು, ನಂತರ ಬೆಳೆಗಳಿಗೆ ನೀರು ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಇಡೀ ರಾಜ್ಯದಲ್ಲಿ ಮಳೆ ಕೊರತೆಯಾಗಿದ್ದು, ಎಲ್ಲಾ ಕಡೆ ಬರದ ಪರಿಸ್ಥಿತಿ ಕಂಡುಬರುತ್ತಿದೆ. ಮುಖ್ಯಮಂತ್ರಿ ಅವರು ವಿಭಾಗ ಮಟ್ಟದಲ್ಲಿ ಸಭೆ ನಡೆಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆ. ಈಗಾಗಲೇ ಸಭೆಗಳನ್ನು ನಡೆಸಿ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆಯ ಕ್ರಮಗಳ ಕುರಿತು ಚರ್ಚಿಸಲಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇನ್ನೂ ನೀರಿನ ಅಭಾವ ಇರುವ ಪ್ರದೇಶಗಳಲ್ಲಿ ಕೊಳವೆ ಬಾವಿ ಕೊರೆಯುವಂತೆ ಸೂಚನೆ ನೀಡಲಾಗಿದ್ದು, ಬರ ನಿರ್ವಹಣೆಗೆ ಪ್ರತಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ತಲಾ ₹1 ಕೋಟಿ ಅನುದಾನ ನೀಡಿದ್ದಾರೆ. ಬರ ಎದುರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಉಜ್ಜನಿ ಜಲಾಶಯದಿಂದ ನೀರು ಬಿಡುಗಡೆ ಮಾಡುವ ವಿಚಾರವನ್ನು ಆಯಾ ಭಾಗದ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳು ಪರಿಶೀಲಿಸಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಹೈಕಮಾಂಡ್ ಸೂಚಿಸಿದ ಬಳಿಕ ರಾಜ್ಯ ನಾಯಕರು ತೆರಳಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಮಹತ್ವದ ಸಭೆ ನಡೆಸಲಿದ್ದಾರೆ.

RELATED ARTICLES
- Advertisment -
Google search engine

Most Popular