ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಡದಿ ಹೋರಾಟಕ್ಕೆ ಬೆಂಬಲ ಸೂಚಿಸಿರುವ ದೇವೇಗೌಡರು, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 7 ಸಾವಿರ ಎಕರೆ ಪ್ರದೇಶದಲ್ಲಿ ಟೌನ್‌ಶಿಪ್ ನಿರ್ಮಿಸುವ ಯೋಜನೆಯ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಹಾಗೂ ಕಾಂಗ್ರೆಸ್ ಹೈಕಮಾಂಡ್ ಒಲಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ದೇವೇಗೌಡರು ದೂರಿದರು. ಚುನಾವಣಾ ಫಂಡ್ ಸಂಗ್ರಹದ ಉದ್ದೇಶದಿಂದ ಬಿಡದಿ ಪ್ರದೇಶದ ಭೂಮಿಯನ್ನು ನಿವೇಶನಗಳಾಗಿ ಪರಿವರ್ತಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಬಡ ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡಬೇಡಿ ಎಂದು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ ನೀಡಿದ್ದಾರೆ ಎಂಬ ಹೇಳಿಕೆಯನ್ನೂ ಪ್ರಶ್ನಿಸಿದರು.



