Wednesday, July 15, 2026
Google search engine

Homeಬ್ರೇಕಿಂಗ್ ನ್ಯೂಸ್ಆಷಾಢ ಶುಕ್ರವಾರದ ಸಿದ್ಧತೆ ಪರಿಶೀಲನೆ : ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ...

ಆಷಾಢ ಶುಕ್ರವಾರದ ಸಿದ್ಧತೆ ಪರಿಶೀಲನೆ : ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಇದೇ 17ನೇ ತಾರೀಖಿನಿಂದ ಆರಂಭವಾಗಲಿರುವ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಇಂದು ಪರಿಶೀಲಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೂರ್ವಭಾವಿ ಸಭೆಯಲ್ಲಿ ಕೈಗೊಂಡಿದ್ದ ಎಲ್ಲಾ ನಿರ್ಧಾರಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ತಿಳಿಸಿದರು.

ಸಾಮಾನ್ಯ ಭಕ್ತರಿಗೆ ಆದ್ಯತೆ

ಆಷಾಢ ಶುಕ್ರವಾರದ ಸಂದರ್ಭದಲ್ಲಿ ಭಕ್ತರ ದಟ್ಟಣೆಯನ್ನು ನಿರ್ವಹಿಸಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ವಿಐಪಿಗಳಿಗಾಗಿ ಬೆಳಿಗ್ಗೆ 5.30ರಿಂದ 9.30ರವರೆಗೆ ಸಮಯ ನಿಗದಿಪಡಿಸಲಾಗಿದೆ. ನಮ್ಮ ಮೊದಲ ಆದ್ಯತೆ ಸಾಮಾನ್ಯ ಜನರಿಗೆ. ಅವರಿಗೆ ಸುಲಭವಾಗಿ ದರ್ಶನ ಸಿಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

ವಾಹನ ಸಂಚಾರ ನಿರ್ಬಂಧ

ಶಾಸಕರು, ಮಂತ್ರಿಗಳು ಹಾಗೂ ನ್ಯಾಯಾಧೀಶರ ವಾಹನಗಳಿಗೆ ಮಾತ್ರ ಬೆಟ್ಟದ ಮೇಲೆ ಅವಕಾಶವಿರುತ್ತದೆ. ಉಳಿದ ಯಾವುದೇ ವಾಹನಗಳಿಗೆ ಪ್ರವೇಶವಿರುವುದಿಲ್ಲ. ಅವರು ಲಲಿತ ಮಹಲ್ ಬಳಿ ವಾಹನ ನಿಲ್ಲಿಸಿ, ಅಲ್ಲಿಂದ ಬಸ್‌ಗಳ ಮೂಲಕ ಬೆಟ್ಟಕ್ಕೆ ಬರಬೇಕು. ಶಾಸಕರು ಅಥವಾ ಮಂತ್ರಿಗಳ ಹೆಸರಿನಲ್ಲಿ ಬರುವವರಿಗೂ ವಾಹನಗಳನ್ನು ಮೇಲೆ ತರಲು ಅವಕಾಶವಿಲ್ಲ ಎಂದರು.

300ರೂ.ಟಿಕೇಟ್‌ ಮಾಡಿದಾಗ ಸಾಮಾನ್ಯ ಕ್ಯೂನಲ್ಲಿ ಬಂದವರಷ್ಟೇ ಸಮಯ ಹಿಡಿಯುತ್ತಿತ್ತು. ಅವರಿಗೇನು ವಿಶೇಷ ಅನುಕೂಲವಾಗುತ್ತಿರಲಿಲ್ಲ, ಹಾಗಾಗಿ ಈ ಬಾರಿ ಅದನ್ನು ಬೇಡ ಎಂದು ತೀರ್ಮಾನಿಸಿದ್ದೇವೆ ಎಂದರು.

ದಸರಾದಲ್ಲಿ ಕಂಬಳದ ಕುರಿತು ಸ್ಪಷ್ಟನೆ

ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವ ಕುರಿತು ಪ್ರತಿಕ್ರಿಯಿಸಿದ ಸಚಿವರು, “ಕಂಬಳ ನಮ್ಮ ರಾಜ್ಯದ ಸಾಂಸ್ಕೃತಿಕ ಕ್ರೀಡೆ. ಇದನ್ನು ರಾಜ್ಯಾದ್ಯಂತ ಪ್ರಚುರಪಡಿಸುವ ಉದ್ದೇಶದಿಂದ ದಸರಾದಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಕುರಿತ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳು ಕೈಗೊಳ್ಳಲಿದ್ದಾರೆ. ಪರಿಸರಕ್ಕೆ ಹಾನಿಯಾಗದಂತೆ ಕ್ರೀಡೆ ನಡೆಸಲು ಸೂಚನೆ ಬಂದರೆ, ಅದಕ್ಕೆ ತಕ್ಕಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು” ಎಂದು ತಿಳಿಸಿದರು.

ಭಕ್ತರಿಗೆ ಮೂಲಭೂತ ಸೌಕರ್ಯ

ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತುವ ಭಕ್ತರಿಗೆ ಮುಂದಿನ ದಿನಗಳಲ್ಲಿ ಶಾಶ್ವತ ಶೌಚಾಲಯ ನಿರ್ಮಿಸಲಾಗುವುದು. ಸದ್ಯ ಆಷಾಢ ಶುಕ್ರವಾರದ ಪ್ರಯುಕ್ತ ಮೂರು ಕಡೆಗಳಲ್ಲಿ ಸುಲಭ ಶೌಚಾಲಯ, ಕುಡಿಯುವ ನೀರು ಹಾಗೂ ಬಾದಾಮಿ ಹಾಲು ಮತ್ತು ಬಿಸ್ಕತ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಚಿವ ಸಂಪುಟ ವಿಸ್ತರಣೆ ಶೀಘ್ರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳಿಂದಾಗಿ ಸಂಪುಟ ವಿಸ್ತರಣೆ ವಿಳಂಬವಾಗಿತ್ತು. ಇದೀಗ ಹೈಕಮಾಂಡ್ ರಾಜ್ಯದ ನಾಯಕರನ್ನು ದೆಹಲಿಗೆ ಕರೆದಿದೆ. ಮುಖ್ಯಮಂತ್ರಿಗಳು ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಗೆ ತೆರಳುತ್ತಿದ್ದು, ಶೀಘ್ರವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular