ರಾಮನಗರ: ಊರು ಅಂದಮೇಲೆ ಹೊಲಗೇರಿ ಇದ್ದೆ ಇರುತ್ತೆ ಎಂಬ ನಟ ಉಪೇಂದ್ರ ಹೇಳಿಕೆ ಖಂಡಿಸಿ ರಾಮನಗರ ತಾಲೂಕಿನ ಬಿಡದಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಟ ಉಪೇಂದ್ರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತಪಡಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದ್ದು, ಉಪೇಂದ್ರ ದಲಿತ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕೂಡಲೇ ನಟ ಉಪೇಂದ್ರರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.