Tuesday, January 13, 2026
Google search engine

Homeಅಪರಾಧಮಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

ಮಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

ಮಂಗಳೂರು(ದಕ್ಷಿಣ ಕನ್ನಡ): ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ  ಘಟನೆ ಮಂಗಳೂರಲ್ಲಿ ನಡೆದಿದೆ.

ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಗದಗ ಜಿಲ್ಲೆಯವರು. ಇವರು ಮಂಗಳೂರು ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ವಾಸವಾಗಿದ್ದರು ಎನ್ನಲಾಗಿದೆ. ಇವರ ಶವ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.

ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಕುಟುಂಬ ಸದಸ್ಯರು ಆಗಮಿಸಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular