Friday, June 20, 2025
Google search engine

Homeರಾಜ್ಯರಾಜ್ಯ ಸರ್ಕಾರ ನಮ್ಮವರಿಗೆ ತೊಂದರೆ ಕೊಟ್ಟು ನೀರು ಹರಿಸಬಾರದು‌: ಡಾ.ನಿರ್ಮಲಾನಂದನಾಥ ಸ್ವಾಮೀಜಿ

ರಾಜ್ಯ ಸರ್ಕಾರ ನಮ್ಮವರಿಗೆ ತೊಂದರೆ ಕೊಟ್ಟು ನೀರು ಹರಿಸಬಾರದು‌: ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಮಂಡ್ಯ: ರಾಜ್ಯ ಸರ್ಕಾರ ನಮ್ಮವರಿಗೆ ತೊಂದರೆ ಕೊಟ್ಟು ನೀರು ಹರಿಸಬಾರದು‌. ಕಾನೂನಾತ್ಮಕವಾಗಿ ಯಾವೆಲ್ಲಾ ಕ್ರಮ ತೆಗೆದುಕೊಳ್ಳಬಹುದು ಅದನ್ನ ಮಾಡಬೇಕು  ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರು ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಹಲವಾರು ದಶಕಗಳಿಂದ ಕಾವೇರಿ ಸಮಸ್ಯೆ ಹಾಗೇ ಉಳಿದಿದೆ. ಆದ್ಯತೆ ಮೇರೆಗೆ ಕುಡಿಯುವ ನೀರು ಕೊಡಬೇಕು. ಅನಂತರ ವ್ಯವಸಾಯಕ್ಕೆ, ಬಳಿಕ ಕೈಗಾರಿಕಾ ಮತ್ತು ಇತರೆ ಬಳಕೆಗೆ ನೀಡಬೇಕು. ತಮಿಳುನಾಡಿಗೆ 419TMC ನೀರು ಪ್ರತಿವರ್ಷ. ಕರ್ನಾಟಕಕ್ಕೆ ಪ್ರತಿವರ್ಷ 270TMC ನಿಗದಿ ಮಾಡಲಾಗಿದೆ. ಆದರೆ ‌ಮಳೆ ಕಡಿಮೆ ಆದ ಸಂಧರ್ಭದಲ್ಲಿ ಸಂಕಷ್ಟ ಸೂತ್ರ ರಚಿಸಬೇಕಿತ್ತು ಎಂದು ಹೇಳಿದರು.

ಈ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಡ್ಯಾಂ‌‌ನಲ್ಲಿ ನೀರಿನ ಸಂಗ್ರಹ ತುಂಬಾ ಕಡಿಮೆ ಇದೆ. ಬೆಳೆ‌ ಒಣಗುವುದು ಒಂದೆಡೆ ಆದರೆ ಮನುಷ್ಯನೇ ಒಣಗಿ ಹೋಗ್ತಾನೆ. ಮನುಷ್ಯನ ಅಸ್ಥಿತ್ವವೇ ಈಗ ಪ್ರಶ್ನೆ ಆಗಿದೆ. ನ್ಯಾಯಾಧೀಶರು ಆದೇಶ ನೀಡುವ ಮುನ್ನ ನಮ್ಮ ನೋವನ್ನು ಕೇಳಬೇಕಿತ್ತು ಎಂದು ತಿಳಿಸಿದರು.

ಪ್ರತಿದಿನ 5 ಸಾವಿರ ಕ್ಯೂಸೆಕ್ ಹರಿಸಲಾಗಿದೆ. ಈಗ ಮತ್ತೆ 5 ಸಾವಿ ಕ್ಯೂಸೆಕ್ 15 ದಿನ ಹರಿಸಲು ಸೂಚನೆ ನೀಡಿದ್ದಾರೆ. ಆದೇಶದಂತೆ ನೀರು ಹರಿದರೆ ಡ್ಯಾಂನಲ್ಲಿ ನೀರು ಉಳಿಯುವುದಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನ್ಯಾಯಾಲಯದಲ್ಲಿ ಸರಿಯಾಗಿ ಮನವರಿಕೆ ಮಾಡಬೇಕು. ನಮ್ಮ ರೈತರ ಹಿತ ಕಾಯಬೇಕು. ಈಗಿನ ಆದೇಶ ಪಾಲನೆ ಮಾಡಬೇಕು, ಪಾಲನೆ ಮಾಡಿದ್ರೆ ರೈತರ ಬದುಕು ಬೀದಿಗೆ ಬರಲಿದೆ. ಸದ್ಯ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಂತ್ರಿಗಳ ಜೊತೆ ನಾನು ಮಾತಮಾಡ್ತೀನಿ. ಸಂಕಷ್ಟ ಸೂತ್ರಕ್ಕಾಗಿ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಜಾರಿ ಮಾಡಬೇಕು. ಮಳೆ ಬಿದ್ದಾಗ ಹೆಚ್ಚುವರಿ ಸಂಗ್ರಹಿಸಿದ್ರೆ ಇಂತಹ ಕಷ್ಟ ಕಾಲದಲ್ಲಿ ಹರಿಸಬಹುದು‌. ಎರಡು ರಾಜ್ಯಗಳಿಗೂ ಮೇಕೆದಾಟು ಯೋಜನೆ ಸಹಕಾರಿ. ನಮ್ಮ ರೈತರು ಸುಖಾಸಮ್ಮನೆ ರಸ್ತೆಗೆ ಬರಲ್ಲ. ಬೀದಿಗೆ ಇಳಿದಿದ್ದಾನೆ ಎಂದರೆ ಆತನಿಗೆ ಕಷ್ಟ ಇದೆ ಎಂದರ್ಥ.  ಇವತ್ತಿನ ಕ್ಯಾಬಿನೆಟ್ ರೈತರ ಪರ ನಿರ್ಧಾರವಾಗಲಿ. ರೈತರ ಪರವಾಗಿ ಶ್ರೀ ಮಠ ಯಾವಾಗಲೂ ಇರುತ್ತದೆ. ನಮ್ಮನ್ನ ಯಾರು ಕರೆಯದೆ ಇದ್ರು ಬಂದಿದ್ದೇವೆ, ಇದು ನಮ್ಮ ಕರ್ತವ್ಯ. ಇಂತಹ ಸಂಧರ್ಭದಲ್ಲಿ ದೇವೇಗೌಡರು, ಎಸ್‌ಎಂ ಕೃಷ್ಣ ಬರಬೇಕು ಎಂದು ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

ಕಾವೇರಿ ಹೋರಾಟದಲ್ಲಿ ಪಾಲ್ಗೊಂಡ ಚುಂಚನಗಿರಿ ಶ್ರೀಗಳಿಗೆ ವಿವಿಧ ಶಾಖೆಗಳ ಶಾಖಾ ಮಠಾಧೀಶರು ಸಾಥ್ ನೀಡಿದರು.

RELATED ARTICLES
- Advertisment -
Google search engine

Most Popular