Thursday, May 22, 2025
Google search engine

Homeರಾಜ್ಯಸುದ್ದಿಜಾಲಐಟಿ ದಾಳಿ ಹಣ ಪತ್ತೆ: ನಾಳೆ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

ಐಟಿ ದಾಳಿ ಹಣ ಪತ್ತೆ: ನಾಳೆ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ(ಅ.೧೬) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಈ ಹಿನ್ನಲೆ ಇಂದು(ಅ.೧೫) ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ನಾಳಿನ ಪ್ರತಿಭಟನೆಯ ರೂಪರೇಷೆ ಹಾಗೂ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಸಭೆಯ ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಕರ್ನಾಟಕದಲ್ಲಿ ಲೂಟಿ ಸರ್ಕಾರ ಜಾರಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾತನಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳಿಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಕಲಾವಿದರಿಂದಲೂ ಕಮಿಷನ್ ಕೇಳುತ್ತಿದ್ದಾರೆ, ಇದು ಎಟಿಎಂ ಸರ್ಕಾರವಾಗಿದೆ. ಸರ್ಕಾರದ ಗುತ್ತಿಗೆದಾರರಿಗೆ ೬೫೦ ಕೋಟಿ ರೂ. ಬಿಡುಗಡೆ ಮಾಡಿದೆ. ಬಿಲ್ ಪಾವತಿ ಬಳಿಕ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ನೈತಿಕ ಹೊಣೆಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಈ ಹಣ ಲೂಟಿ ಹೊಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜಿಲ್ಲೆಗಳಲ್ಲಿ ಮತ್ತು ನಾಡಿದ್ದು ಮಂಡಲಗಳಲ್ಲಿ ಬೃಹತ್ ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ. ಇನ್ನು ಈ ಸಭೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರಾದ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

RELATED ARTICLES
- Advertisment -
Google search engine

Most Popular