ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಮೈಸೂರು ದಸರಾ ವೈಭವ ದಿನೇ ದಿನೇ ರಂಗೇರುತ್ತಿದೆ. ಪ್ರತಿದಿನ ನಡೆಯುತ್ತಿರುವ ವೈವಿಧ್ಯಮಯ ಕಾರ್ಯಕ್ರಮಗಳು ನಾಡಹಬ್ಬದ ಮೆರುಗನ್ನು ಹೆಚ್ಚಿಸಿವೆ. ದೀಪಾಲಂಕಾರ ಸಾಂಸ್ಕೃತಿಕ ನಗರಿಗೆ ಆಗಮಿಸುವ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಇಂದು ಮೈಸೂರಿನ ಕಲಾಮಂದಿರದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಗ್ಗೆ ೧೧ ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಲಲಿತಕಲೆ ಹಾಗೂ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌ಸಿ.ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಬೆಳಗ್ಗೆ ೧೧.೩೦ಕ್ಕೆ ಕಾವ್ಯ ಸಂಭ್ರಮ, ಹಾಸ್ಯ ಚುಟುಕು ಕಾರ್ಯಕ್ರಮ ನಡೆಯಲಿದ್ದು ಸಾಹಿತಿ ಜಯಂತ್ ಕಾಯ್ಕಿಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.