Tuesday, May 20, 2025
Google search engine

Homeಸ್ಥಳೀಯಮೈಸೂರು ದಸರಾ: ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಉದ್ಘಾಟನೆ

ಮೈಸೂರು ದಸರಾ: ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಉದ್ಘಾಟನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿಯ ವತಿಯಿಂದ ಆಯೋಜಿಸಿದ್ದ ಮಕ್ಕಳಿಗಾಗಿ ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಗೆ ಟೆಪ್ ಕತ್ತರಿಸುವುದರ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ.ಮಹದೇವಪ್ಪ ಅವರು ಕಲಾಮಂದಿರದಲ್ಲಿ ಉದ್ಘಾಟಿಸಿದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಒಟ್ಟಾರೆ 325 ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ 1ರಿಂದ 4ನೇ ತರಗತಿ ವಿದ್ಯಾರ್ಥಿಗಳು 110 ಜನ ಭಾಗವಹಿಸಿದ್ದು, ಮತ್ತು 5ರಿಂದ 7ನೇ ತರಗತಿ ವಿದ್ಯಾರ್ಥಿಗಳು 111 ಜನ ಭಾಗವಹಿಸಿದ್ದು, 8ರಿಂದ 10ನೇ ತರಗತಿ ವಿದ್ಯಾರ್ಥಿಗಳು 104 ಜನ ಭಾಗವಹಿಸಿದ್ದಾರೆ.

1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಸರ, ಪ್ರಾಣಿ, ಪಕ್ಷಿಗಳು,ಮೈಸೂರು ದಸರಾದ, ವಿಷಯ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಮೈಲುಗಲ್ಲು ವಿಷಯದ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ವಿಶ್ವ ಪಾರಂಪರಿಕ ತಾಣಗಳ ವಿಷಯ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಚಿತ್ರಕಲೆ ಸಭೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು 22 ರಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular