Wednesday, May 21, 2025
Google search engine

Homeರಾಜ್ಯಸುದ್ದಿಜಾಲಇಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ನಗರ ಸಂಚಾರ: ಸ್ವಚ್ಛತೆ ಪರಿಶೀಲನೆ, ಸಾರ್ವಜನಿಕರ ಕುಂದು ಕೊರತೆ...

ಇಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ನಗರ ಸಂಚಾರ: ಸ್ವಚ್ಛತೆ ಪರಿಶೀಲನೆ, ಸಾರ್ವಜನಿಕರ ಕುಂದು ಕೊರತೆ ವಿಚಾರಣೆ

ಚಾಮರಾಜನಗರ: ಇಂದು ಜಿಲ್ಲಾಧಿಕಾರಿ ಎ.ಶಿಲ್ಪಾ ನಾಗ್ ಅವರು ಬೆಳಗ್ಗೆಯಿಂದಲೇ ನಗರದಲ್ಲಿ ಸಂಚರಿಸಿ ಸ್ವಚ್ಛತೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಪಾಲಿಕೆಯ ವಿವಿಧ ವಾರ್ಡ್‌ಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೈರ್ಮಲ್ಯ ಮತ್ತಿತರ ಚಟುವಟಿಕೆಗಳನ್ನು ವೀಕ್ಷಿಸಿದರು. ಪೌರ ಕಾರ್ಮಿಕರೊಂದಿಗೆ ಮಾತನಾಡಿ ಅವರ ಕುಂದು ಕೊರತೆಗಳನ್ನು ಆಲಿಸಿದರು. ಪಟ್ಟಣದ ಮಾರುಕಟ್ಟೆಗೆ ಭೇಟಿ ನೀಡಿ ವರ್ತಕರ ಅಹವಾಲು ಆಲಿಸಿದರು.

ಸದರಿ ಪ್ರದೇಶದಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ನಗರದ ಹಳೆ ಪೊಲೀಸ್ ಠಾಣೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹದೇಶ್ವರ ಬಡಾವಣೆಗೆ ಭೇಟಿ ನೀಡಿ, ಸಾರ್ವಜನಿಕರೊಂದಿಗೆ ಚರ್ಚಿಸಿ ಬಡಾವಣೆ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಕುರಿತು ಚರ್ಚಿಸಿದರು. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಆಯುಕ್ತ ಎಸ್.ವಿ.ರಾಮದಾಸ್, ನಗರಸಭೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular