ಬೆಂಗಳೂರು: ರಾಜ್ಯ ಸರಕಾರವು ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ. ಹನುಮಂತಪ್ಪ ಸೇರಿದಂತೆ ಎಂಟು ಮಂದಿ ಸಾಧಕರಿಗೆ ೨೦೨೩ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಸಚಿವ ಬಿ.ನಾಗೇಂದ್ರ ಪ್ರಕಟಿಸಿದರು.
ಇಂದು ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಂಗ ಕ್ಷೇತ್ರದಿಂದ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ, ಧಾರ್ಮಿಕ ಕ್ಷೇತ್ರದಿಂದ ಮಹಾದೇವಮ್ಮ, ಶಿಕ್ಷಣ ಕ್ಷೇತ್ರದಿಂದ ರಾಮಣ್ಣ ಮಹಾದೇವ ಗಸ್ತಿ, ಸಮಾಜ ಸೇವೆ ಕ್ಷೇತ್ರದಿಂದ ಜಿ.ಓ.ಮಹಾಂತಪ್ಪ, ಸಾಮಾಜಿಕ ಸಂಘಟನೆ ಕ್ಷೇತ್ರದಿಂದ ಸೋಮಣ್ಣ, ವೈದ್ಯಕೀಯ ಕ್ಷೇತ್ರದಿಂದ ಶಾರದಪ್ರಭು ಹುಲಿ ನಾಯಕ, ಸಾಹಿತ್ಯ ಕ್ಷೇತ್ರದಿಂದ ಸುಕನ್ಯಾ ಮಾರುತಿ ಹಾಗೂ ರಂಗಭೂಮಿ ಕ್ಷೇತ್ರದಿಂದ ಸುಜಾತಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.