Friday, May 23, 2025
Google search engine

Homeರಾಜ್ಯಸುದ್ದಿಜಾಲಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ: ರಾಮಲಿಂಗಾರೆಡ್ಡಿ

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ: ರಾಮಲಿಂಗಾರೆಡ್ಡಿ

ರಾಮನಗರ: ಸಾರ್ವಜನಿಕರು ತಮ್ಮ ಆಹ್ವಾಲು ಗಳನ್ನ ತಮ್ಮ ಬಳಿ ತಂದಾಗ ಅಧಿಕಾರಿಗಳು ಸ್ಪಂದಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ, ಮುಜರಾಯಿ ಇಲಾಖೆ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.

ಇಂದು ಮಾಗಡಿ ಟೌನಿನ ಡಾ. ಶ್ರೀ ಶಿವಕುಮಾರ ಸ್ವಾಮಿಗಳ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನತಾ ದರ್ಶನ ಕಾರ್ಯಕ್ರಮ ಜನರಿಗೆ ಸ್ಪಂದಿಸುವ ಕಾರ್ಯಕ್ರಮವಾಗಬೇಕು ಜನರ ಸಮಸ್ಯೆಗಳನ್ನು ಪರಿಶೀಲಿಸಿ ಕಾನೂನು ಚೌಕಟ್ಟಿನಲ್ಲಿ ಪರಿಹರಿಸುವಂತೆ ತಿಳಿಸಿದರು. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಸಾರ್ವಜನಿಕ ಕುಂದುಕೊರತೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಬಹುದಾದ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಇಲ್ಲವಾದಲ್ಲಿ ಸಂಬಂಧಪಟ್ಟ ಇಲಾಖೆಗೆ ಅರ್ಜಿಯನ್ನು ವರ್ಗಾವಣೆ ಮಾಡಿ, ಸಮಸ್ಯೆಯನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ತಿಳಿಸಿದರು. ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಮಾತನಾಡಿ, ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಈ ಕಾರ್ಯಕ್ರಮವನ್ನು ಆಯೋಜಿಸುವಂತೆ ಮುಖ್ಯಮಂತ್ರಿಗಳು ಆದೇಶಿಸಿರುವ ನಿಟ್ಟಿನಲ್ಲಿ ಇಂದು ಜನತಾ ದರ್ಶನ ಕಾರ್ಯ ಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸುವಾಗ ಹಿಂದೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾಗಿದ್ದ ಅರ್ಜಿಗಳಿಗೆ ಪರಿಹಾರ ನೀಡಿರಬೇಕು. ಮತ್ತೆ ಮತ್ತೆ ಅದೇ ಅರ್ಜಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕಾರ ಆಗದಂತೆ ಕ್ರಮ ವಹಿಸಿರಬೇಕು ಎಂದರು. ಜನರ ಸಮಸ್ಯೆಗಳಿಗೆ ಪರಿಹಾರ ದೊರೆತಾಗಲೇ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಎಲ್ಲಾ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಲು ತಮ್ಮ ಸಮಯ ನೀಡಬೇಕು ಎಂದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಇಂದು ಒಟ್ಟು ೧೮೧ ಅರ್ಜಿಗಳು ಸ್ವೀಕೃತವಾಯಿತು. ಅದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ೯೮ ಅರ್ಜಿಗಳು ಸ್ವೀಕೃತಗೊಂಡವು. ಕಾರ್ಯಕ್ರಮದಲ್ಲಿ ವಿಪತ್ತು ನಿರ್ವಹಣೆ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular