ಚನ್ನಪಟ್ಟಣ: ತಾಲೂಕಿನ ವಳಗೆರೆದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಆರ್. ಶಂಕರ್‌ಅವರು ಅವಿರೋಧವಾಗಿ ಆಯ್ಕೆಯಾದರು. ಸಂಘದ ಅಧ್ಯಕ್ಷ ಮಹದೇವು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಆರ್. ಶಂಕರ್ ಅವರು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕೆ. ಉಮೇಶ್‌ಅವರು ಪ್ರಕಟಿಸಿದರು.
ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಮಹದೇವು, ಉಪಾಧ್ಯಕ್ಷರಾದ ಜಯಲಕ್ಷ್ಮಮ್ಮ, ನಿರ್ದೇಶಕರುಗಳಾದ ವೆಂಕಟೇಶ್, ಶಿವಣ್ಣ, ವೆಂಕಟೇಶ್, ಎಸ್.ಸಿದ್ದರಾಜು, ಬಿ.ಎಸ್. ಸವಿತ ಅವರು ಭಾಗವಹಿಸಿ ಅಧ್ಯಕ್ಷರ ಆಯ್ಕೆಗೆ ಒಮ್ಮತ ನೀಡಿದರು.
ಸಂಘದ ಅಭಿವೃದ್ಧಿಗೆ ಶ್ರಮಿಸುವೆ: ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ಶಂಕರ್ ಮಾತನಾಡಿ ಸಂಘದ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಈ ಬಗ್ಗೆ ಬಮೂಲ್ ನಿರ್ದೇಶಕರು ಮತ್ತು ಸಂಘದ ಎಲ್ಲಾ ನಿರ್ದೇಶಕರು ಹಾಗೂ ಗ್ರಾಮದ ಮುಖಂಡ ಮಾರ್ಗದರ್ಶನದಲ್ಲಿ ಸಂಘದ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು. ನನ್ನನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೆಶಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಸಂದರ್ಭದಲ್ಲಿ ಹಲವರು ಹಾಜರಿದ್ದು ಅಭಿನಂದಿಸಿದರು.