Wednesday, May 21, 2025
Google search engine

Homeರಾಜ್ಯಸುದ್ದಿಜಾಲಕರ್ನಾಟಕ ಸಂಭ್ರಮ -50 ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಕರ್ನಾಟಕ ಸಂಭ್ರಮ -50 ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಧಾರವಾಡ: ರಾಜ್ಯಕ್ಕೆ ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳಲಿರುವ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ವಿಜೃಂಭಣೆಯಿಂದ ಕನ್ನಡ ಹಬ್ಬವಾಗಿ ರಾಜ್ಯೋತ್ಸವವನ್ನು ಆಚರಿಸಲು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕøತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ, ಮತ್ತು ಯುವಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಎಂಬ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗತವೈಭವವನ್ನು ಮರುಕಳಿಸುವ ರೀತಿಯಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.ಅವರು ಹೇಳಿದರು. ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು 68 ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ಮಾಡುವರು.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪುರೈಸಿದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕನ್ನಡಾಂಬೆಗೆ ನುಡಿ ನಮನ ಅರ್ಪಿಸಲಾಗುತ್ತಿದೆ, ನಾಡಿನ ಹೆಸರಾಂತ ಕವಿಗಳಾದ ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ಎಲ್ಲಾದರೂ ಇರು ಎಂತಾದರು ಇರು, ದ.ರಾ. ಬೇಂದ್ರೆ ಅವರ ಒಂದೇ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ ಅವರ ಹೊತ್ತಿತೋ ಹೊತ್ತಿತೋ ಕನ್ನಡದ ದೀಪ ಹಾಗೂ ಚೆನ್ನವೀರ ಕಣವಿ ಅವರ ಹೆಸರಾಯಿತು ಕನ್ನಡ ಉಸಿರಾಗಲಿ ಕನ್ನಡ ಗೀತೆಗಳು ಏಕಕಾಲದಲ್ಲಿ ಕನ್ನಡ ಹಾಡುಗಳ ಗೀತಗಾಯನ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಹೇಳಿದರು. ಸಭೆಯಲ್ಲಿ ಕನ್ನಡ ಮತ್ತು ಸಾಂಸ್ಕøತಿಕ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular